ಸುದ್ದಿ

ತೈಲ ಬೆಲೆ :ಸಚಿವರೊಂದಿಗೆ ಪ್ರಧಾನಿ ಮೋದಿ ತುರ್ತುಸಭೆ…

ಬೆಂಗಳೂರು : ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಿದ್ದರೂ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಯಾವುದೇ ಕ್ರಮಕ್ಕೂ ಮುಂದಾಗಿರಲಿಲ್ಲ. ಇದೀಗ ಕಡೆಗೂ ರಂಗಪ್ರವೇಶಿಸಿರುವ ಮೋದಿ ಅವರು ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಚಿವರೊಂದಿಗೆ ಗುರುವಾರ ತುರ್ತು ಸಭೆ ಕರೆದಿದ್ದಾರೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ವಿತ್ತ ಸಚಿವ ಅರುಣ್ ಜೈಟ್ಲಿ ಹಾಗೂ ಧರ್ಮೇಂದ್ರ ಪ್ರಧಾನ್ ಜೊತೆ ತುರ್ತು ಸಭೆ ಕರೆದ ಪ್ರಧಾನಿ ನರೇಂದ್ರ ಮೋದಿ, ತೈಲ ಬೆಲೆ ಏರಿಕೆ ಕೃಷಿ ಕ್ಷೇತ್ರದ ಮೇಲೆ ಬೀರುತ್ತಿರುವ ಪರಿಣಾಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ-ಇಳಿಕೆ ಬಗ್ಗೆ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ ಜೊತೆ ಚರ್ಚೆ ನಡೆಸಿದರೆ, ಆರ್ಥಿಕ ಸ್ಥಿತಿಗತಿಗಳ ಬಗ್ಗೆ ವಿತ್ತ ಸಚಿವ ಅರುಣ್ ಜೈಟ್ಲಿ ಜೊತೆ ಚರ್ಚಿಸಿದ್ದಾರೆ.

 

About the author

ಕನ್ನಡ ಟುಡೆ

Leave a Comment