ರಾಷ್ಟ್ರ

ತ್ರಿವಳಿ ತಲಾಖ್ ಕಾಯ್ದೆಗೆ ತೀವ್ರ ವಿರೋಧ : ಕೇಂದ್ರದ ವಿರುದ್ಧ ಬೀದಿಗಿಳಿದ ಮುಸ್ಲಿಂ ಮಹಿಳೆಯರು

ನವದೆಹಲಿ: ತ್ರಿವಳಿ ತಲಾಖ್‌ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದ ಬಳಿಕ ಮುಸ್ಲಿಂ ಸಮುದಾಯದಲ್ಲಿನ ಬಹುಪತ್ನಿತ್ವ ಹಾಗೂ ನಿಖಾ ಹಲಾಲ್‌ ಕಾಯ್ದೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನಿಷೇಧ ಹೇರಿದೆ.ಲೋಕಸಭೆಯಲ್ಲಿ ಈ ಕುರಿತ ಬಿಲ್‌ ಪಾಸ್‌ ಕೂಡ ಮಾಡಲಾಗಿದೆ. ಈ ಮಧ್ಯೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೆಲ ಮುಸ್ಲಿಂ ಮಹಿಳಾ ಸಂಘಟನೆಗಳು ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ವಿರೋಧ ವ್ಯಕ್ತಪಡಿಸಿವೆ. ಹೌದು, ತ್ರಿವಳಿ ತಲಾಖ್ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮುಸ್ಲಿಂ ಮಹಿಳೆಯರು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಮೋದಿ ಸರ್ಕಾರ ಈ ಕೂಡಲೇ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಒಂದು ವೇಳೆ ತ್ರಿವಳಿ ತಲಾಖ್‌ ವಿಷಯದಲ್ಲಿ ನಮ್ಮ ಪತಿ ಜೈಲಿಗೆ ಹೋದರೆ ನಮ್ಮನ್ನು ನೋಡಿಕೊಳ್ಳುವವರು ಯಾರು? ಇದು ಸಮ್ಮ ಮುಸ್ಲಿಂ ಸಮುದಾಯದ ಕಾನೂನಿಗೆ ವಿರುದ್ಧವಾಗಿದ್ದು, ತಕ್ಷಣ ಕೇಂದ್ರ ಸರ್ಕಾರ ಈ ಬಿಲ್‌ ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ಈ ಮಸೂದೆ, ರಾಜ್ಯಸಭೆಯಲ್ಲಿ ಪಾಸ್‌ ಆಗಬೇಕಾಗಿದೆ. ಈ ಮಧ್ಯೆ ಕೆಲ ಮಹಿಳಾ ಮುಸ್ಲಿಂ ಸಂಘಟನೆಗಳು ಇದರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

About the author

Pradeep Kumar T R

Leave a Comment