ರಾಷ್ಟ್ರ ಸುದ್ದಿ

ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿ ಆರು ಉಗ್ರರನ್ನು ಸದೆಬಡಿದ ಸೇನೆ

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್​ ಭಾಗದಲ್ಲಿ ನಡೆದ ಉಗ್ರರು ಹಾಗೂ ಯೋಧರ ನಡುವಿನ ಗುಂಡಿನ ಚಕಮಕಿಯಲ್ಲಿ ಆರು ಮಂದಿ ಉಗ್ರರನ್ನು ಭಾರತೀಯ ಸೇನೆ ಶನಿವಾರ ಹೊಡೆದುರುಳಿಸಿದೆ.

ಉಗ್ರರು ಅಡಗಿ ಕುಳಿತಿರುವ ಬಗ್ಗೆ ಮಾಹಿತಿ ಪಡೆದುಕೊಂಡ ಸೇನೆ ತ್ರಾಲ್​ ಪ್ರದೇಶವನ್ನು ಸುತ್ತುವರಿದು 6 ಮಂದಿ ಉಗ್ರರನ್ನು ಸದೆಬಡಿದಿದೆ. ಅಲ್ಲದೆ, ಶಸ್ತ್ರಾಸ್ತ್ರಗಳು ಹಾಗೂ ಯುದ್ಧ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಐಜಿಪಿ ಸ್ವಯಂ ಪ್ರಕಾಶ್ ಪಣಿ ಮಾಹಿತಿ ನೀಡಿದ್ದಾರೆ. ಕಳೆದ ವಾರ ಪುಲ್ವಾಮದಲ್ಲಿ ನಡೆದ ಉಗ್ರರು ಹಾಗೂ ರಕ್ಷಣಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಗರಿಕರು, ಓರ್ವ ಯೋಧ ಹಾಗೂ ಮೂವರು ಉಗ್ರರು ಸೇರಿ ಒಟ್ಟು 11 ಮಂದಿ ಹತರಾಗಿದ್ದರು. ಅಲ್ಲದೆ, ಹಲವಾರು ನಾಗರಿಕರು ಗಾಯಗೊಂಡಿದ್ದರು.

About the author

ಕನ್ನಡ ಟುಡೆ

Leave a Comment