ರಾಷ್ಟ್ರ

ದಲಿತರ ಹೆಸರಲ್ಲಿ ಕಾಂಗ್ರೆಸ್‌ ರಾಜಕೀಯ: ಪ್ರತಿಪಕ್ಷದ ನಡೆಗೆ ಪ್ರಧಾನಿ ಮೋದಿ ಟೀಕೆ

ಹೊಸದಿಲ್ಲಿ: ಪರಿಶಿಷ್ಟ ಜಾತಿ, ಪಂಗಡದ ಜನರ ದೌರ್ಜನ್ಯ ತಡೆ ಕಾಯಿದೆ ಕುರಿತು ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು ಕಾಂಗ್ರೆಸ್‌ ತನ್ನ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಸುಪ್ರೀಂ ತೀರ್ಪಿನ ವಿರುದ್ಧ ಹೊತ್ತಿ ಉರಿದ ಪ್ರತಿಭಟನೆಯ ಕಿಚ್ಚು ತಣ್ಣಗಾಗುವ ಮೊದಲೇ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ, ದೌರ್ಜನ್ಯ ತಡೆ ಕಾಯಿದೆ ಕುರಿತ ಪ್ರಕರಣ ಭುಗಿಲೆದ್ದ ಬಳಿಕ ಇದೇ ಮೊದಲ ಬಾರಿ ಆ ವಿಷಯ ಕುರಿತು ಪ್ರಧಾನಿ ಮೋದಿ ಪ್ರಸ್ತಾಪಿಸಿದರು. ಸುಪ್ರೀಂ ಕೋರ್ಟ್‌ ತೀರ್ಪಿಗೆ ತಮ್ಮ ಸಮ್ಮತಿ ಇಲ್ಲ ಎನ್ನುವುದನ್ನು ಬಿಜೆಪಿಯ ಅನೇಕ ಹಿರಿಯ ನಾಯಕರು ಸ್ಪಷ್ಟ ಪಡಿಸಿದ್ದಾರೆ. ದಲಿತರ ಕಲ್ಯಾಣಕ್ಕೆ ಕೇಂದ್ರ ಸರಕಾರ ಕೈಗೊಂಡ ಯೋಜನೆಗಳ ಕುರಿತೂ ವಿವರಿಸಿದ್ದಾರೆ. ಆದರೂ ಕಾಂಗ್ರೆಸ್‌ ಈ ವಿಚಾರದಲ್ಲಿ ವೃಥಾ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು. ಬಾಬಾ ಸಾಹೇಬರಿಗೆ ನಮ್ಮ ಸರಕಾರ ಅಪಾರ ಗೌರವ ಸಲ್ಲಿಸುತ್ತ ಬಂದಿದೆ. ಅವರನ್ನು ರಾಜಕೀಯಕ್ಕೆ ಎಳೆತರುವ ಬದಲು, ಅವರ ಆದರ್ಶದ ದಾರಿಯಲ್ಲಿ ನಡೆಯುವ ಪ್ರಯತ್ನ ಮಾಡುತ್ತಿದ್ದೇವೆ.

About the author

ಕನ್ನಡ ಟುಡೆ

Leave a Comment