ರಾಜ್ಯ ಸುದ್ದಿ

ದಾವಣಗೆರೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಸಿಡಿಲು ಬಡಿದು ತಾಯಿ, ಮಗಳು ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಸಿಡಿಲು ಬಡಿದು ತಾಯಿ, ಮಗಳು ಇಬ್ಬರೂ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ನಡೆದಿದೆ. ಜಿಲ್ಲೆಯ ಹರಪನಹಳ್ಳಿಯಲ್ಲಿ ತಾಲೂಕಿನ ಚನ್ನಹಳ್ಳಿ ತಾಂಡದಲ್ಲಿ ಈ ಘಟನೆ ನಡೆದಿದ್ದು, ಮೃತ ತಾಯಿ ಸವಿತಾ ಬಾಯಿ ಹಾಗೂ ಮಗಳು ಪಲ್ಲವಿ ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದಾಗ ತಾಯಿ, ಮಗಳು ಸಿಡಿಲು ಬಡಿದು ಮೃತಪಟ್ಟಿದ್ದಾರೆ.

About the author

ಕನ್ನಡ ಟುಡೆ

Leave a Comment