ರಾಜ್ಯ ಸುದ್ದಿ

ದೆಹಲಿಗೆ ರಮೇಶ್ ಜಾರಕಿಹೊಳಿ ದೌಡು: ಬಿಜೆಪಿ ಮುಖಂಡ ಅಮಿತ್ ಶಾ ಭೇಟಿ

ಬೆಂಗಳೂರು: ಕಾಂಗ್ರೆಸ್ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿಗೆ ಯತ್ನಿಸ್ತಿದ್ದಾರೆ ಎಂದು ಹೇಳಲಾಗಿದೆ.
ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಹೇಳಿ ನಾಲ್ಕು ದಿನ ಕಾಯಿರಿ ಎಂದು ಕುತೂಹಲ ಮೂಡಿಸಿರುವ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ನಿಗೂಡ ನಡೆ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರು ಪ್ರಧಾನಿ ಮೋದಿ, ಅಮಿತ್ ಶಾರನ್ನ ಭೇಟಿ ಮಾಡಲಿದ್ದಾರೆ. ಗುರುವಾರವೇ ದೆಹಲಿಗೆ ರಮೇಶ್ ಜಾರಕಿಹೊಳಿ ಹೋಗಿದ್ದಾರೆ ಎನ್ನಲಾಗಿದೆ. ದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ಜೊತೆಗೆ ಮಾತುಕತೆಗೆ ಜಾರಕಿಹೊಳಿ ಯತ್ನಿಸಿದ್ದು, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ವಾಲ್ಮೀಕಿ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

About the author

ಕನ್ನಡ ಟುಡೆ

Leave a Comment