ರಾಷ್ಟ್ರ ಸುದ್ದಿ

ದೆಹಲಿ ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ: ಕೇಜ್ರಿವಾಲ್, ಸಿಸೋಡಿಯಾಗೆ ಜಾಮೀನು

ನವದೆಹಲಿ: ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರಿಗೆ ದೆಹಲಿ ಕೋರ್ಟ್ ಗುರುವಾರ ಜಾಮೀನು ನೀಡಿದೆ.
ಆಮ್ ಆದ್ಮಿ ಪಕ್ಷದ ಶಾಸಕರಾದ ಅಮನತುಲ್ಲಾ ಖಾನ್ ಮತ್ತು ಪ್ರಕಾಶ್ ಜರ್ವಾಲ್ ಅವರನ್ನು ಹೊರತುಪಡಿಸಿ ಪ್ರಕರಣದ ಇತರೆ ಎಲ್ಲಾ ಆರೋಪಿಗಳಿಗೂ ಕೋರ್ಟ್ 50 ಸಾವಿರ ರುಪಾಯಿ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಮಂಜೂರು ಮಾಡಿದೆ. ಅಮನತುಲ್ಲಾ ಖಾನ್ ಮತ್ತು ಪ್ರಕಾಶ್ ಜರ್ವಾಲ್ ಅವರು ಈಗಾಗಲೇ ದೆಹಲಿ ಹೈಕೋರ್ಟ್ ನಿಂದ ಜಾಮೀನು ಪಡೆದುಕೊಂಡಿದ್ದಾರೆ. ಫೆ.19ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಸಭೆ ನಡೆಯುತ್ತಿದ್ದ ವೇಳೆ ತಮ್ಮ ಮೇಲೆ ಆಪ್ ಶಾಸಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮುಖ್ಯ ಕಾರ್ಯದರ್ಶಿ ದೆಹಲಿ ಪೊಲೀಸರಿಗೆ ದೂರು ನೀಡಿದ್ದರು.

About the author

ಕನ್ನಡ ಟುಡೆ

Leave a Comment