ರಾಜಕೀಯ

ದೇಶದ ಪ್ರಧಾನಿಯೇ ಸುಳ್ಳುಗಾರ: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

ಬೆಂಗಳೂರು: ಸುಳ್ಳುಗಾರರೊಬ್ಬರು ದೇಶದ ಪ್ರಧಾನಿಯಾಗಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ವಾಕ್‌ ಪ್ರಹಾರ ನಡೆಸಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿಯಿಂದ ಅರಮನೆ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿ,”ಶ್ರೀಮಂತರ ಸಾಲ ಮನ್ನಾ ಮಾಡುವ ಕೇಂದ್ರ ಸರಕಾರಕ್ಕೆ ಬಡವರ ಬಗ್ಗೆ ಕಾಳಜಿಯೇ ಇಲ್ಲ. ಪ್ರಚಾರದ ಜಾಹೀರಾತಿಗಾಗಿ ಬಿಜೆಪಿ ಸಾವಿರಾರು ಕೋಟಿ ರೂ. ವ್ಯಯಿಸುತ್ತಿದೆ,”ಎಂದು ಆರೋಪಿಸಿದರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ಕೆ.ಪಾಟೀಲ್‌ ಮಾತನಾಡಿ, ”ಮೋದಿಗೆ ಸುಳ್ಳು ಹೇಳುವುದೇ ಕಾಯಕವಾಗಿದೆ,” ಎಂದು ಹೇಳಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ವಿ.ಆರ್‌.ಸುದರ್ಶನ್‌, ರಾಣಿ ಸತೀಶ್‌, ಎಸ್‌.ನಂಜಯ್ಯನಮಠ ಭಾಗಿಯಾಗಿದ್ದರು.

About the author

ಕನ್ನಡ ಟುಡೆ

Leave a Comment