ರಾಜ್ಯ ಸುದ್ದಿ

ದೇಶದ ರೈತರಿಗೆ ಭರ್ಜರಿ ಗಿಫ್ಟ್ ಕೊಡಲು ಕೇಂದ್ರ ಸರ್ಕಾರ ತಯಾರಿ

ಬೆಂಗಳೂರು: ಪಂಚ ರಾಜ್ಯಗಳ ಸೋಲಿನಿಂದ ಕಂಗೆಟ್ಟಿರುವ ಕೇಂದ್ರ ಸರ್ಕಾರ ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ದೇಶದ ರೈತರನ್ನು ತಮ್ಮ ಕಡೆಗೆ ಸೆಳೆಯಲು ಭರ್ಜರಿ ಗಿಫ್ಟ್​ ನೀಡುವುದಕ್ಕೆ ಸಜ್ಜಾಗಿದೆ.

ಮುಂಬರುವ 2019ರ ಲೋಕಸಭೆ ಚುನಾವಣೆ ಮೇಲೆ ಎನ್​ಡಿಎ ನೇತೃತ್ವದ ಕೇಂದ್ರದ ಸರ್ಕಾರ ಕಣ್ಣಿಟ್ಟಿದೆ. ದೇಶದ ರೈತರನ್ನು ತಮ್ಮತ್ತ ಸೆಳೆಯಲು ರೈತರ ಸಾಲಮನ್ನಾ ಮಾಡುವ ಚಿಂತನೆಯನ್ನು ಮಾಡಿದೆ.

ದೇಶದ 26ಕೋಟಿ 30ಲಕ್ಷ ರೈತರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ಸಾಲವನ್ನು ಮನ್ನಾ ಮಾಡಲು ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ. ಸಾಲಮನ್ನಾ ಮಾಡುವ ಸಂಬಂಧ ಶೀಘ್ರವೇ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದ್ದು, ಅನ್ನದಾತರನ್ನು ಸೆಳೆಯಲು ಮೋದಿ ಸರ್ಕಾರ ಮುಂದಾಗಿದೆ.

2008ರಲ್ಲಿ ಯುಪಿಎ 72 ಸಾವಿರ ಕೋಟಿ ರೂ. ರೈತರ ಸಾಲಮನ್ನಾ ಮಾಡಿತ್ತು. ಅದರ ಪರಿಣಾಮವಾಗಿ 2009ರ ಲೋಕಸಭೆ ಚುನಾವಣೆಯಲ್ಲೂ ಯುಪಿಎ ಮತ್ತೆ ಅಧಿಕಾರಕ್ಕೇರಿದ್ದನ್ನು ಸ್ಮರಿಸಬಹುದಾಗಿದೆ.

ನನಗೆ ಅಚ್ಚರಿ ತಂದಿಲ್ಲ
ಕೇಂದ್ರದ ಚಿಂತನೆ ನನಗೆ ಅಚ್ಚರಿ ತಂದಿಲ್ಲ. 3 ತಿಂಗಳ ಹಿಂದೆಯೇ ಸಾಲಮನ್ನಾ ಚಿಂತನೆ ಬಗ್ಗೆ ನನಗೆ ಗೊತ್ತಿತ್ತು. ಕೇಂದ್ರದಲ್ಲೂ ನನಗೆ ಸ್ನೇಹಿತರಿದ್ದಾರೆ, ಅವರು ನನಗೆ ತಿಳಿಸಿದ್ದಾರೆ. ರೈತರ ಸಾಲಮನ್ನಾ ಮಾಡದಿದ್ದರೆ, ಚುನಾವಣೆ ಕಷ್ಟ ಎಂಬುದು ಕೇಂದ್ರ ಸರ್ಕಾರಕ್ಕೆ ಗೊತ್ತಿದೆ. ಹೀಗಾಗಿ ಮೋದಿ ಸಾಲಮನ್ನಾ ನಿರ್ಧಾರ ಕೈಗೊಂಡರೂ ಅಚ್ಚರಿಯಿಲ್ಲ ಎಂದು ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಬೆಳಗಾವಿಯ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದರು.

About the author

ಕನ್ನಡ ಟುಡೆ

Leave a Comment