ದೇಶ ವಿದೇಶ

ಧರ್ಮಸ್ಥಳಕ್ಕೆ ಭೇಟಿ ನೀಡಿದ ಸುಮಲತಾ ಅಂಬರೀಷ್ 

ಧರ್ಮಸ್ಥಳ: ಮಂಡ್ಯ ಲೋಕಸಭಾ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಇಂದು ಬೆಳಗ್ಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬೆಳಗ್ಗೆ 5 ಗಂಟೆಗೆ ಧರ್ಮಸ್ಥಳಕ್ಕೆ ಆಗಮಿಸಿದ ಸುಮಲತಾ ಅಂಬರೀಷ್ ಸನ್ನಿಧಿ ಅತಿಥಿ ಗೃಹದಲ್ಲಿ ವಿಶ್ರಾಂತಿ ಪಡೆದರು. ಬಳಿಕ 10:30ಕ್ಕೆ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನಕ್ಕೆ ತೆರಳಿದರು. ಅವರ ಜತೆಗೆ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹಾಗೂ ಹಿರಿಯ ನಟ ದೊಡ್ಡಣ್ಣ ಇದ್ದರು.

ಇದೇ ವೇಳೆ ಅವರು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜತೆ ಸಮಾಲೋಚನೆ ನಡೆಸಿದರು.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸುಮಲತಾ ಅಂಬರೀಷ್ ಜೆಡಿಎಸ್‌ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ತೀವ್ರ ಪೈಪೋಟಿ ನೀಡುತ್ತಿದ್ದಾರೆ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದನ್ನು ಒಪ್ಪದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ದೊಡ್ಡ ಪ್ರಮಾಣದಲ್ಲಿ ಸುಮಲತಾ ಅವರ ಬೆಂಬಲಕ್ಕೆ ನಿಂತಿದ್ದಾರೆ. ಅಲ್ಲದೆ ಚಿತ್ರರಂಗದ ‘ಜೋಡೆತ್ತು’ಗಳೆಂದೇ ಹೆಸರಾದ ಯಶ್ ಹಾಗೂ ದರ್ಶನ್‌ ಸುಮಲತಾ ಪರ ಪ್ರಚಾರಕ್ಕೆ ಸಿದ್ಧರಾಗಿದ್ದಾರೆ. ಇದೇ ವೇಳೇ ಬಿಜೆಪಿ ಕೂಡ, ಮಂಡ್ಯದಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಸುಮಲತಾ ಅವರಿಗೆ ಬೆಂಬಲ ಘೋಷಿಸಿದೆ.

About the author

ಕನ್ನಡ ಟುಡೆ

Leave a Comment