ರಾಜ್ಯ ಸುದ್ದಿ

ಧರ್ಮ ಒಡೆದ ಆರೋಪ: ನನ್ನದೇನೂ ತಪ್ಪಿಲ್ಲ ಎಂದ ಸಿದ್ದರಾಮಯ್ಯ

ಶಿವಮೊಗ್ಗ: ಪ್ರತ್ಯೇಕ ಧರ್ಮ ರಚನೆ ವಿಚಾರದಲ್ಲಿ ನನ್ನದೇನೂ ತಪ್ಪಿಲ್ಲ, ನಾನು ಧರ್ಮ, ಜಾತಿ ಒಡೆದಿಲ್ಲ, ಧರ್ಮವನ್ನು ವಿಭಜಿಸುವ ಉದ್ದೇಶವೂ ನನಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಚುನಾವನಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಕಾರ್ಯಕ್ರಮವೊಂದರಲ್ಲಿ ನನ್ನನ್ನು ಸನ್ಮಾನಿಸಲು ಆಹ್ವಾನಿಸಿದ್ದರು. ಈ ಸಂದರ್ಭದಲ್ಲಿ ಅವರು ಪ್ರತ್ಯೇಕ ಧರ್ಮ ಮಾಡುವ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ಮನವಿ ಮಾಡಿದ್ದರು.

ಆ ನಂತರ ಪ್ರತ್ಯೇಕ ಧರ್ಮ ಮಾಡುವಂತೆ 5 ಅರ್ಜಿ ಬಂತು. ನಂತರ ನಾಗಮೋಹನ್​ ದಾಸ್​ ನೇತೃತ್ವದ ಸಮಿತಿ ತನ್ನ ವರದಿಯನ್ನು ನೀಡಿತು. ಈ ವರದಿಯನ್ನು ಆಧರಿಸಿ ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರ ಸಂಪುಟದಲ್ಲಿ ನಿರ್ಧಾರ ತೆಗೆದುಕೊಳ್ಳಲಾಯಿತು. ಈ ನಿರ್ಧಾರ ಮಾಡುವಾಗ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ವಿನಯ್ ಕುಲಕರ್ಣಿ, ಬಸವರಾಜ ರಾಯರೆಡ್ಡಿ, ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ್ ಸಹ ಇದ್ದರು. ಅದು ಎಲ್ಲರೂ ಸಮ್ಮತಿ ನೀಡಿದ ತೀರ್ಮಾನವಾಗಿತ್ತು ಎಂದು ತಿಳಿಸಿದರು.

About the author

ಕನ್ನಡ ಟುಡೆ

Leave a Comment