ರಾಜ್ಯ ಸುದ್ದಿ

ಧೀಮಂತ ನಾಯಕ ಮಾಜಿ ಕೇಂದ್ರ ಸಚಿವರಾದ ಸಿ.ಕೆ. ಜಾಫರ್ ಷರೀಫ್ ಅಂತ್ಯಕ್ರಿಯೆ

ಬೆಂಗಳೂರು: ಹಿರಿಯ ಕಾಂಗ್ರೆಸಿಗ, ಮಾಜಿ ಕೇಂದ್ರ ಸಚಿವರಾದ ಸಿ.ಕೆ. ಜಾಫರ್ ಷರೀಫ್​ ( 85 ) ಅಂತ್ಯಕ್ರಿಯೆ ಜಯಮಹಲ್​ ಖುದ್ದುಸ್ ಸಾಹೇಬ್​ನಲ್ಲಿ ಸೋಮವಾರ ಮಧ್ಯಾಹ್ನ ನಡೆಯಿತು.

ಮುಸ್ಲಿಂ ಸಮುದಾಯದ ಮುಖಂಡರು, ಕಾಂಗ್ರೆಸ್ ಪ್ರತಿನಿಧಿಗಳು, ಷರೀಫ್​ ಕುಟುಂಬಸ್ಥರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ನೆರವೇರಿತು. ಇದಕ್ಕೂ ಮೊದಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಡಿಸಿಎಂ ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್​ ಸೇರಿದಂತೆ ಕಾಂಗ್ರೆಸ್​ನ ಹಿರಿಯ ನಾಯಕರು ಷರೀಫ್​ ಪಾರ್ಥಿವ ಶರೀರದ ದರ್ಶನ ಮಾಡಿ ಅಗಲಿದ ನಾಯಕನಿಗೆ ಸಂತಾಪ ಸಲ್ಲಿಸಿದ್ದರು. ಷರೀಫ್ ಅವರ ಮನೆಯಿಂದ ಪಾರ್ಥಿವ ಶರೀರವನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ಇಸ್ಲಾಂ ಧರ್ಮದ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳನ್ನು ಪೂರೈಸಲಾಯಿತು.

ಷರೀಫ್ ಅವರು ದೀರ್ಘಕಾಲದ ಅಸ್ವಸ್ಥತೆ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲಿ ಭಾನುವಾರ ಮಧ್ಯಾಹ್ನ ಆಸ್ಪತ್ರೆಯಲ್ಲಿ ನಿಧನರಾದರು. 1933ರ ನವೆಂಬರ್ 3ರಂದು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯಲ್ಲಿ ಜನಿಸಿದ್ದರು. ವಿದ್ಯಾರ್ಥಿ ದೆಸೆಯಿಂದಲೇ ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡು ನಂತರ ರಾಜಕೀಯ ಜೀವನದಲ್ಲಿ ಏಳಿಗೆ ಹೊಂದಿದರು. ಹಲವು ಬಾರಿ ಸಂಸದರಾಗಿ ರೈಲ್ವೆ ಸಚಿವರಾಗಿದ್ದರು. ರೈಲ್ವೆಯಲ್ಲಿ ರಾಜ್ಯಕ್ಕೆ ಹಲವಾರು ಕೊಡುಗೆ ನೀಡಿದ್ದರು.

About the author

ಕನ್ನಡ ಟುಡೆ

Leave a Comment