ಸಿನಿ ಸಮಾಚಾರ

ನಟ ರಮೇಶ್ ಸಾರಥ್ಯದ ನಿರೂಪಣೆಯಲ್ಲಿ ಕನ್ನಡದ ಕೋಟ್ಯಾಧಿಪತಿ -ಸೀಜನ್ 3

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ಕಾರ್ಯಕ್ರಮ ಕನ್ನಡದ ಕೋಟ್ಯಾಧಿಪತಿಗೆ ಹೊಸ ಸಾರಥಿ ದೊರಕಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಡೆಸಿಕೊಡುತ್ತಿದ್ದ ಕಾರ್ಯಕ್ರಮದ ಹೊಸ ಸೀಜನ್ ನಿರೂಪಣೆಗೆ ಕನ್ನಡದ ಇನ್ನೊಬ್ಬ ಪ್ರಸಿದ್ದ ನಟ ರಮೇಶ್ ಅರವಿಂದ್ ಒಪ್ಪಿದ್ದಾರೆಂದು ಹೇಳಲಾಗಿದೆ.

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಮೂಲಕ ಮೋಡಿ ಮಾಡಿದ್ದ ರಮೇಶ್ ಅರವಿಂದ್ ಸ್ಟಾರ್ ಸುವರ್ಣ ವಾಹಿನಿ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದ ಮೂರನೇ ಸೀಜನ್ ನಲ್ಲಿ ನಿರೂಪಕರಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿದೆ. ಕನ್ನಡದಲ್ಲಿ ಎರಡು ಸೀಜನ್ ಗಳಲ್ಲಿ ಪುನೀತ್ ರಾಜ್ ಕುಮಾರ್ ನಡೆಸಿಕೊಟ್ಟಿದ್ದ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮಕ್ಕೆ ಈ ಬಾರಿ ಪುನೀತ್ ಬದಲಿಗೆ ನಟ ರಮೇಶ್ ಆಗಮನವಾಗಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

 

 

 

 

About the author

ಕನ್ನಡ ಟುಡೆ

Leave a Comment