ಸಿನಿ ಸಮಾಚಾರ

ನಟ ವಿನೋದ್ ರಾಜ್ ಕಾರಿನಲ್ಲಿದ್ದ 1 ಲಕ್ಷ ರೂ. ದೋಚಿದ ಕಳ್ಳರು

ಬೆಂಗಳೂರು:ಕಾರಿನ ಟಯರ್ ಪಂಚರ್ ಆಗಿದೆ ಎಂದು ಹೇಳಿ ನಟ ವಿನೋದ್ ರಾಜ್ ಅವರ ಕಾರಿನಲ್ಲಿದ್ದ ಒಂದು ಲಕ್ಷ ರೂಪಾಯಿಯನ್ನು ಇಬ್ಬರು ಕಳ್ಳರು ದೋಚಿರುವ ಘಟನೆ ನೆಲಮಂಗಲದ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಮ್ಮ ತೋಟದ ಕೂಲಿಯಾಳುಗಳಿಗೆ ಸಂಬಳ ನೀಡಲು ನಟ ವಿನೋದ್ ರಾಜ್ ಅವರು ಬ್ಯಾಂಕ್ ನಿಂದ ಒಂದು ಲಕ್ಷ ರೂಪಾಯಿ ಹಣವನ್ನು ಡ್ರಾ ಮಾಡಿಕೊಂಡು ಬಂದು ಕಾರನ್ನು ಸಿಎನ್ ಆರ್ ಬಟ್ಟೆ ಮಳಿಗೆ ಬಳಿ ನಿಲ್ಲಿಸಿದ್ದರು. ಈ ಸಂದರ್ಭದಲ್ಲಿ ಬಂದ ಇಬ್ಬರು ಏನ್ ಸರ್ ಚೆನ್ನಾಗಿದ್ದೀರಾ ಎಂದು ಆತ್ಮೀಯತೆಯಿಂದ ಮಾತನಾಡಿಸಿದ್ದರಂತೆ.

ಬಳಿಕ ಕಾರು ಪಂಚರ್ ಆಗಿದೆ ಎಂದು ಹೇಳಿ ರಿಪೇರಿ ಮಾಡುವ ನೆಪದಲ್ಲಿ ಕಾರಿನೊಳಗೆ ಇದ್ದ ಒಂದು ಲಕ್ಷ ರೂಪಾಯಿ ಹಣವನ್ನು ಕದ್ದು ಪರಾರಿಯಾಗಿದ್ದಾರೆಂದು ನಟ ವಿನೋದ್ ರಾಜ್ ತಿಳಿಸಿದ್ದಾರೆ. ಈ ಬಗ್ಗೆ ನೆಲಮಂಗಲ ನಗರ ಠಾಣೆಗೆ ದೂರು ನೀಡಲಾಗಿದೆ ಎಂದು ಹೇಳಿದರು.

 

About the author

ಕನ್ನಡ ಟುಡೆ

Leave a Comment