ರಾಜಕೀಯ

ನನಗೆ ಬಿಜೆಪಿಯಿಂದ 30 ಕೋಟಿ ರೂ. ಆಮಿಷವೊಡ್ಡಲಾಗಿತ್ತು: ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ನನಗೂ 30 ಕೋಟಿ ರೂ. ಹಣ ಮತ್ತು ಸಚಿವ ಸ್ಥಾನ ನೀಡುತ್ತೇನೆ ಎಂದು ಆಮಿಷ ಒಡ್ಡಿದ್ದರು. ಆದರೆ, ನಾನು ಬಿಜೆಪಿಯ ಆಮಿಷಕ್ಕೆ ಬಗ್ಗಲಿಲ್ಲ ಎಂದು ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ ಸಮ್ಮಿಶ್ರ ಸರ್ಕಾರದ ಅಸ್ಥಿರಕ್ಕೆ ಬಿಜೆಪಿಯಿಂದ ಯತ್ನ ನಡೆದಿದೆ. ನನ್ನನ್ನೂ ಸೇರಿ ಕಾಂಗ್ರೆಸ್ ಹಾಗೂ ಜೆಡಿಎಸ್​ ಶಾಸಕರಿಗೆ ಹಣದ ಆಮಿಷ ಒಡ್ಡಿದ್ದಾರೆ ಎಂದು ದೂರಿದರು.

ನನಗೆ ಬಂದ ಮೆಸೇಜ್​ ಹಾಗೂ ಫೋನ್​ ಕರೆಗಳನ್ನು ಪಕ್ಷದ ಮುಖಂಡರಿಗೆ ತೋರಿಸಿದ್ದೇನೆ. ನಮ್ಮ ಶಾಸಕರು ಗಟ್ಟಿಯಾಗಿದ್ದಾರೆ. ಎಲ್ಲಿಯೂ ಹೊಗುವುದಿಲ್ಲ. ಸರ್ಕಾರ 5 ವರ್ಷ ಸುಭದ್ರವಾಗಿರುತ್ತದೆ ಎಂದು ಹೇಳಿದರು. 

About the author

ಕನ್ನಡ ಟುಡೆ

Leave a Comment