ಸುದ್ದಿ

ನಲಪಾಡ್‌ಗೆ ಜಾಮೀನು ನೀಡದಂತೆ ‘ಸುಪ್ರೀಂ’ಗೆ ರಾಜ್ಯ ಸರ್ಕಾರ ಕೇವಿಯಟ್ ಸಲ್ಲಿಸಿದೆ.

ನವದೆಹಲಿ: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಲಪಾಡ್ ಆರೋಪಿಯು ಶಾಂತಿನಗರದ ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ ಜಾಮೀನು ನೀಡದಂತೆ ಸುಪ್ರೀಂಕೋರ್ಟ್ ಗೆ ರಾಜ್ಯ ಸರ್ಕಾರ ಕೇವಿಯಟ್ ಸಲ್ಲಿಸಿದೆ.

ಕಳೆದ ಫೆಬ್ರವರಿ 17ರಂದು ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಯು.ಬಿ.ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಎಂಬ ಯುವಕನ ಮೇಲೆ ಹಲ್ಲೆ ಮಾಡಿದ್ದರು  ಇದರಿಂದಾಗಿ ಎಲ್ಲಾ ಆರೋಪಿಗಳ ವಿರುದ್ಧ ಕೊಲೆ ಯತ್ನದ ಪ್ರರಕಣ ದಾಖಲಾಗಿದೆ.

ಪ್ರಕರಣದ ಸಂಬಂಧ ಮೊಹಮ್ಮದ್ ನಲಪಾಡ್ ಹಾಗೂ ಇತರ ಆರೋಪಿಗಳಿಗೆ ಜಾಮೀನು ನೀಡದಂತೆ ರಾಜ್ಯದ ವಕೀಲರಾದ ಸಂಜಯ್ ನೂಲಿ ಅವರು ಕೇವಿಯಟ್ ಸಲ್ಲಿಸಿದ್ದಾರೆ. ಸದ್ಯ ಮೊಹಮ್ಮದ್ ನಲಪಾಡ್ ಪ್ರಕರಣ ಸಂಬಂಧದಿಂದಾಗಿ ನ್ಯಾಯಾಂಗದ ಬಂಧನದಲ್ಲಿದ್ದು ಪರಪ್ಪನ ಅಗ್ರಹಾರದ ಸೆರೆ ಮನೆಯಲ್ಲಿ ಇಡಲಾಗಿದೆ.

 

 

About the author

ಕನ್ನಡ ಟುಡೆ

Leave a Comment