ರಾಷ್ಟ್ರ ಸುದ್ದಿ

ನವದೆಹಲಿ: ಜ.31ರಿಂದ ಸಂಸತ್ ಅಧಿವೇಶನ, ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್

ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರು ಫೆಬ್ರವರಿ 1ರಂದು ಮಧ್ಯಂತರ ಬಜೆಟ್ ಮಂಡನೆ ಮಾಡಲಿದ್ದಾರೆಂದು ಬುಧವಾರ ತಿಳಿದುಬಂದಿದೆ. ಬಜೆಟ್ ಮಂಡನೆ ಕುರಿತ ನಿರ್ಣಯವನ್ನು ಸಂಸದೀಯ ವ್ಯವಹಾರ ಸಂಪುಟ ಸಮಿತಿ ಸಭೆಯಲ್ಲಿ ಕೈಗೊಳ್ಳಲಾಗಿದ್ದು, ಜನವರಿ 31 ರಿಂದ ಫೆಬ್ರವರಿ 13ರವರೆಗೆ ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ನಡೆಯಲಿದೆ. ಫೆಬ್ರವರಿ 1 ರಂದು ಜೇಟ್ಲಿಯವರು ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆಂದು ವರದಿಗಳು ತಿಳಿಸಿವೆ.
ಅರುಣ್ ಜೇಟ್ಲಿಯವರು ಮಂಡನೆ ಮಾಡುತ್ತಿರುವ 6ನೇ ಬಜೆಟ್ ಇದಾಗಿದ್ದು, ಲೋಕಸಭಾ ಚುನಾವಣೆ ಹತ್ತಿರ ಇರುವ ಹಿನ್ನಲೆಯಲ್ಲಿ ಈ ಬಾರಿಯ ಬಜೆಟ್ ಭಾರೀ ನಿರೀಕ್ಷೆಗಳನ್ನು ಮೂಡಿಸಿದೆ. ಹಣಕಾಸು ಸಚಿವಾಲಯ ಬಜೆಟ್ ಭಾಷಣಕ್ಕಾಗಿ ಈಗಾಗಲೇ ವಿವಿಧ ಸಚಿವಾಲಯಗಳಿಂದ ಅಭಿಪ್ರಾಯಗಳನ್ನು ಪಡೆದುಕೊಂಡಿದೆ.

About the author

ಕನ್ನಡ ಟುಡೆ

Leave a Comment