ಸಿನಿ ಸಮಾಚಾರ

ನವರಸ ನಾಯಕ ಜಗ್ಗೇಶ್ ಎನ್‌‍ಕೌಂಟರ್ ಸ್ಪೆಷಲಿಸ್ಟ್

ಬೆಂಗಳೂರು: ಕನ್ನಡ ಚಿತ್ರರಂಗದ ನವರಸ ನಾಯಕ ಜಗ್ಗೇಶ್ ಅವರಿಗೆ ಪ್ರಯೋಗಾತ್ಮಕ ಚಿತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದಾರೆ.ನವನಿರ್ದೇಶಕ ಹರಿಕೃಷ್ಣ ನಿರ್ದೇಶನದ 8ಎಂಎಂ ಚಿತ್ರದಲ್ಲಿ ಜಗ್ಗೇಶ್ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ನಂತರ ಕವಿರಾಜ್ ನಿರ್ದೇಶನದಲ್ಲಿ ಚಿತ್ರದಲ್ಲಿ ಜಗ್ಗೇಶ್ ಎನ್‌‍ಕೌಂಟರ್ ಸ್ಪೆಷಲಿಸ್ಟ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರದ ಒನ್ ಲೈನ್ ಸ್ಟೋರಿ ಕೇಳಿರುವ ಜಗ್ಗೇಶ್ ಚಿತ್ರದಲ್ಲಿ ಅಭಿನಯಿಸುವುದಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಅಧಿಕೃತ ಘೋಷಣೆ ಹೊರಬೀಳಲಿದೆ. ಏಪ್ರಿಲ್ ಅಥವಾ ಮೇನಲ್ಲಚಿತ್ರೀಕರಣ ಆರಂಭಿಸಲು ಚಿತ್ರತಂಡ ನಿರ್ಧರಿಸಿದ್ದು ಚಿತ್ರಕ್ಕೆ ಗುರುಕಿರಣ್ ಸಂಗೀತ ಸಂಯೋಜಿಸುತ್ತಿದ್ದು ಎ.ವಿ ಕೃಷ್ಣಕುಮಾರ್ ಅವರ ಛಾಯಾಗ್ರಹಣ ಮಾಡುತ್ತಿದ್ದಾರೆ.

 

About the author

ಕನ್ನಡ ಟುಡೆ

Leave a Comment