ರಾಜ್ಯ ಸುದ್ದಿ

ನಾನು ಝೀರೋ ಟ್ರಾಫಿಕ್ ವ್ಯವಸ್ಥೆ ಪಡೆದರೆ ನಿಮಗೆ ಹೊಟ್ಟೆ ಉರಿಯೇ; ಜಿ.ಪರಮೇಶ್ವರ್

ಬೆಂಗಳೂರು: ಝಿರೋ ಟ್ರಾಫಿಕ್ ವ್ಯವಸ್ಥೆ ನನಗೂ ಇದೆ, ಹೀಗಾಗಿ ಬಳಸಿಕೊಳ್ಳುತ್ತಿದ್ದೇನೆ. ನಾನು ಝಿರೋ ಟ್ರಾಫಿಕ್ ತಗೆದುಕೊಳ್ಳುವುದು  ಮಾಧ್ಯಮಗಳಿಗೆ ಹೊಟ್ಟೆ ಉರಿಯೇ ಎಂದು  ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ, ಕೊಡವ ಸಮಾಜ ಮತ್ತು ಬಿಬಿಎಂಪಿ ಸಹಯೋಗದಲ್ಲಿ ನಗರದ ಮಿಲ್ಲರ್ಸ್ ರಸ್ತೆಯ ಜಂಕ್ಷನ್ ಬಳಿ ಫೀಲ್ಡ್ ಮಾರ್ಷಲ್ ಕಾರಿಯಪ್ಪರವರ ಪ್ರತಿಮೆ ಪ್ರತಿಷ್ಠಾಪಿಸಲಾಗಿತ್ತು. ಇದರ ಉದ್ಘಾಟನಾ ಕಾರ್ಯಕ್ರಮಕ್ಕೆ ಡಿಸಿಎಂ ಪರಮೇಶ್ವರ್ ರವರನ್ನು ಆಹ್ವಾನಿಸಲಾಗಿತ್ತು. ಇಂದು ಸಹ ಝಿರೋ ಟ್ರಾಫಿಕ್ ಮೂಲಕವೇ ಕಾರ್ಯಕ್ರಮಕ್ಕೆ ಡಿಸಿಎಂ ಆಗಮಿಸಿದ್ದರು. ಝಿರೋ ಟ್ರಾಫಿಕ್ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ರಾಜ್ಯದಲ್ಲಿ ಮುಖ್ಯಮಂತ್ರಿಗಳು, ಗಣ್ಯವ್ಯಕ್ತಿ, ರಾಜ್ಯಪಾಲರು ಹಾಗೂ ಗೃಹ ಸಚಿವರಿಗೂ ಸಹ ಝಿರೋ ಟ್ರಾಫಿಕ್ ಅವಕಾಶ ನೀಡಲಾಗಿದೆ. ಹೀಗಾಗಿ ಇದನ್ನು ನಾನು ಬಳಸಿಕೊಳ್ಳುತ್ತಿದ್ದೇನೆ. ಝಿರೋ ಟ್ರಾಫಿಕ್ ಅಗತ್ಯ ಇದೆ ಎನ್ನುವುದರಿಂದ ಅವಕಾಶ ನೀಡಲಾಗಿದೆ. ಈ ಹಿಂದಿನ ಗೃಹ ಸಚಿವರು ಬೇಡ ಎಂದಿದ್ದರು. ಹಾಗಂತ ನಾನು ಸಹ ಬೇಡ ಎನ್ನಬೇಕಿಲ್ಲ. ನನಗೆ ಇರುವ ಅವಕಾಶವನ್ನು ಬಳಸಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.

About the author

ಕನ್ನಡ ಟುಡೆ

Leave a Comment