ರಾಜ್ಯ ಸುದ್ದಿ

ನಾನು, ಯಡಿಯೂರಪ್ಪ ಒಳ್ಳೆಯ ಗೆಳೆಯರು: ಸಿದ್ದರಾಮಯ್ಯ

ಬೆಂಗಳೂರು: ಸದಾ ಆರೋಪ – ಪ್ರತ್ಯಾರೋಪದಲ್ಲಿ ತೊಡಗುತ್ತಿದ್ದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಆಕಸ್ಮಿಕವಾಗಿ ಹುಬ್ಬಳಿಯ ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿದರು. ಇಬ್ಬರು ನಾಯಕರು ಕೆಲ ಕಾಲ ಪರಸ್ಪರ ಉಭಯ ಕುಶಲೋಪರಿ ಸಹ ನಡೆಸಿದರು.
ಪರಸ್ಪರ ವಾಗ್ದಾಳಿ ನಡೆಸುತ್ತಿದ್ದ ಯಡಿಯೂರಪ್ಪ, ಸಿದ್ದರಾಮಯ್ಯ ಕೆಲವು ನಿಮಿಷಗಳ ಕಾಲ ಕುಶಲೋಪರಿ ನಡೆಸಿದರು. ಉಭಯ ನಾಯಕರು ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಒಂದೇ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸಿದ್ದರು. ವಿಮಾನ ನಿಲ್ದಾಣದ ವಿಐಪಿ ಕೊಠಡಿಯಲ್ಲಿ ಮುಖಾಮುಖಿಯಾದ ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಅವರು ಒಬ್ಬರಿಗೊಬ್ಬರು ಹಸ್ತಲಾಘವ ಮಾಡಿ, ಆತ್ಮೀಯವಾಗಿ ಮಾತುಕತೆ ನಡೆಸಿದರು. ನಂತರ ಅಲ್ಲಿಂದೆ ಬೇರೆ ಬೇರೆ ಕಾರ್ಯಕ್ರಮಗಳಿಗೆ ತೆರಳಿದರು.
ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ‘ರಾಜಕೀಯ ಜೀವನದ ಹೊರತಾಗಿ ಯಡಿಯೂರಪ್ಪನವರು ಮತ್ತು ನಾನು ಒಳ್ಳೆಯ ಗೆಳೆಯರು. ಇಲ್ಲಿ ಅಧಿಕಾರ, ಅಂತಸ್ತು ಯಾವುದೂ ಶಾಶ್ವತವಲ್ಲ, ಕೊನೆಗೊಂದು ದಿನ‌ ಗೆಲ್ಲುವುದು ನಮ್ಮ ನಡುವಿನ ಮಾನವೀಯ ಸಂಬಂಧಗಳು ಮಾತ್ರ. ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾದೆ’ ಎಂದು ತಿಳಿಸಿದ್ದಾರೆ.

About the author

ಕನ್ನಡ ಟುಡೆ

Leave a Comment