ಸುದ್ದಿ

ನಾಮಪತ್ರ ಸಲ್ಲಿಕೆ ಇಂದು ಕೊನೇ ದಿನ

ಬೆಂಗಳೂರು: ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಲು ಗುರುವಾರ (ಏ.4) ಕೊನೇ ದಿನವಾಗಿದೆ. ನಾಮಪತ್ರ ಸಲ್ಲಿಸಲು ಇನ್ನೊಂದೇ ದಿನ ಬಾಕಿ ಇರುವುದರಿಂದ ಬುಧವಾರ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿತ್ತು. ರಾಜ್ಯಾದ್ಯಂತ 84 ಅಭ್ಯರ್ಥಿಗಳು 110 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಅದರಂತೆ 14 ಕ್ಷೇತ್ರಗಳಲ್ಲಿ ಇಲ್ಲಿವರೆಗೆ 172 ಅಭ್ಯರ್ಥಿಗಳು 249 ನಾಮಪತ್ರಗಳನ್ನು ಸಲ್ಲಿಸಿದಂತಾಗಿದೆ. ಏ.5ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್‌ ಪಡೆಯಲು ಏ.8 ಕೊನೇ ದಿನಾಂಕ.

About the author

ಕನ್ನಡ ಟುಡೆ

Leave a Comment