ರಾಜಕೀಯ

ನಾವು ಆಪರೇಷನ್ ಮಾಡಿಲ್ಲ, ಅವರೇ ನಮಗೆ ಆಪರೇಷನ್ ಮಾಡಲು ಯತ್ನಿಸುತ್ತಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ

ಬೆಂಗಳೂರು: ನಾವು ಆಪರೇಷನ್ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ನಾವು ಶಾಸಕರನ್ನು ಸೆಳೆಯುತ್ತಿಲ್ಲ, ಕುದುರೆ ವ್ಯಾಪಾರದಲ್ಲಿ ತೊಡಗಿರುವುದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಅವರೇ ಹಣದ, ಮಂತ್ರಿ ಸ್ಥಾನದ ಆಮಿಷವೊಡ್ಡಿ  ನಮ್ಮ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದ್ದಾರೆ ಎಂದು ಯಡಿಯೂರಪ್ಪ ಆರೋಪಿಸಿದ್ದಾರೆ.
“ಬಿಜೆಪಿ ಶಾಸಕರು ಲೋಕಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಸಲುವಾಗಿ ಒಂದೆಡೆ ಸೇರಿದ್ದರು. ಬಿಜೆಪಿ ಶಾಸಕರು ಒಟ್ಟಿಗೆ ಸೇರಿದ್ದರಿಂದ ಜೆಡಿಎಸ್-ಕಾಂಗ್ರೆಸ್ ನಾಯಕರೇಕೆ  ಚಿಂತೆಗೊಳಗಾದರು ಎಂಬುದು ನನಗೆ ಅರ್ಥವಾಗುತ್ತಿಲ್ಲ”.ಬಿಜೆಪಿ ಶಾಸಕರು ಒಂದೆಡೆ ಸೇರಿದರೆ ಕಾಂಗ್ರೆಸ್-ಜೆಡಿಎಸ್ ಗೆ ಏಕೆಭಯ ಎಂದು ಪ್ರಶ್ನಿಸಿರುವ ಯಡಿಯೂರಪ್ಪ ನಮ್ಮ ವಿರುದ್ಧ ಶಾಸಕರನ್ನು ಸೆಳೆಯುತ್ತಿರುವ ಆರೋಪ ಮಾಡುವ ಬದಲು ಅವರ ಶಾಸಕರನ್ನು ಹಿಡಿದಿಟ್ಟುಕೊಳ್ಳಲಿ, ಅವರ ಶಾಸಕರು ಅತೃಪ್ತರಾದರೆ ಅವರನ್ನು ಒಗ್ಗೂಡಿಸುವುದು ನನ್ನ ಜವಾಬ್ದಾರಿಯಲ್ಲ ಎಂದು ಯಡಿಯೂರಪ್ಪ ಸಮ್ಮಿಶ್ರ ಸರ್ಕಾರದ ಆರೋಪಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

About the author

ಕನ್ನಡ ಟುಡೆ

Leave a Comment