ರಾಜಕೀಯ

ನಿಖಿಲ್ ಪರ ಪ್ರಚಾರ ಮಾಡಿ ಇಲ್ಲವೇ ಪಕ್ಷ ಬಿಟ್ಟು ಹೋಗಿ: ಕೈ ಕಾರ್ಯಕರ್ತರಿಗೆ ಸಿದ್ದು ಪುಲ್ ಕ್ಲಾಸ್

ಬೆಂಗಳೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ನಡುವಿನ ತಿಕ್ಕಾಟ ಮುಂದುವರೆದಿರುವಂತೆಯೇ ಇಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಫುಲ್ ಕ್ಲಾಸ್ ತೆಗೆದುಕೊಂಡಿದ್ದು, ಮೈತ್ರಿ ಅಭ್ಯರ್ಥಿ ನಿಖಿಲ್ ಪರ ಪ್ರಚಾರ ಮಾಡಿ ಇಲ್ಲವೇ ಪಕ್ಷ ಬಿಟ್ಟು ಹೋಗಿ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಹಳೆ ದ್ವೇಷ ಮರೆತು ಮೈತ್ರಿ ಅಭ್ಯರ್ಥಿ ನಿಖಿಲ್​​ ಪರವಾಗಿ ಕೆಲಸ ಮಾಡುವಂತೆ ಸೂಚಿಸಲು ಮಾಜಿ ಸಿಎಂ ಸಿದ್ದರಾಮಯ್ಯನವರು ಇಂದು ಮಂಡ್ಯ ಜಿಲ್ಲೆಯ ಮುಖಂಡರೊಂದಿಗೆ ಸಭೆ ನಡೆಸಿದರು. ಈ ವೇಳೆ ‘ನಾವು ಮೈತ್ರಿ ಅಭ್ಯರ್ಥಿಯನ್ನು ಒಮ್ಮತದಿಂದ ಬೆಂಬಲಿಸಬೇಕಿದೆ. ಯಾವುದೇ ಕಾರಣಕ್ಕೂ ನೀವು ಸುಮಲತಾ ಪರವಾಗಿ ಪ್ರಚಾರ ಮಾಡಬಾರದು. ಮಂಡ್ಯದಲ್ಲಿ ನೀವು ಜೆಡಿಎಸ್​​ ನೊಂದಿಗೆ ಸೇರಿ ಮೈತ್ರಿ ಅಭ್ಯರ್ಥಿಗೆ ಪ್ರಚಾರ ಮಾಡಬೇಕು ಎಂದು ಹೇಳಿದರು. ಇದೇ ವೇಳೆ ಕೆಲ ಸ್ಥಳೀಯ ಕಾಂಗ್ರೆಸ್​​ ನಾಯಕರ ತರಾಟೆಗೆ ತೆಗೆದುಕೊಂಡ ಸಿದ್ದು, ‘ಸುಮಲತಾ ಪ್ರಚಾರದ ವೇಳೆ ಕಾಂಗ್ರೆಸ್​ ಬಾವುಟ ಪ್ರದರ್ಶಿಸಲಾಗುತ್ತಿದೆ. ಇದರಿಂದ ರಾಜ್ಯದಲ್ಲಿ ಮೈತ್ರಿಗೆ ಪೆಟ್ಟು ಬೀಳಲಿದೆ. ನಾವು ಎಷ್ಟು ಬಾರಿ ನಿಮಗೆ ಎಚ್ಚರಿಕೆ ನೀಡಿದರೂ ಪ್ರಯೋಜನವಾಗಲಿಲ್ಲ. ಇನ್ನೊಮ್ಮೆ ಹೀಗಾದರೇ ನಾವು ಪಕ್ಷದಿಂದ ನಿಮ್ಮನ್ನು ಕಿತ್ತೊಗೆಯಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜೆಡಿಎಸ್ ವಿರುದ್ಧ ಸ್ಥಳೀಯ ನಾಯಕರ ತೀವ್ರ ಅಸಮಾಧಾನ: ಇನ್ನು ಸ್ಥಳೀಯ ಕಾಂಗ್ರೆಸ್ಸಿಗರು ಮಂಡ್ಯ ಜಿಲ್ಲಾ ಜೆಡಿಎಸ್​ ನಾಯಕರ ವಿರುದ್ಧ ಸಭೆಯಲ್ಲಿ ತೀವ್ರ ಅಸಮಾಧಾನ ಹೊರಹಾಕಿದ್ಧಾರೆ. ಸಿಎಂ ಎಚ್​​.ಡಿ ಕುಮಾರಸ್ವಾಮಿಯವರು ಪದೇ ಪದೇ ನಮ್ಮನ್ನ ಟಾರ್ಗೆಟ್ ಮಾಡುತ್ತಿದ್ದಾರೆ. ಬೆನ್ನಿಗೆ ಚೂರಿ ಹಾಕಿದೀವಿ ಅಂತ ಹೇಳುತ್ತಿದ್ಧಾರೆ. ಹೀಗಿರುವಾಗ ನಾವು ಯಾವ ಮುಖ ಇಟ್ಕೊಂಡು ನಿಖಿಲ್ ಪರ ಕೆಲಸ ಮಾಡಬೇಕು. ನಮ್ಮನ್ನ ಪದೇ ಪದೇ ಹೀಗೆ ಅವಮಾನಿಸಿದರೆ ಹೇಗೆ ? ನಮಗೂ ಗೌರವ ಇಲ್ವಾ ? ಅವರಿಗೆ ನಮ್ಮ‌ ಮೇಲೆ ನಂಬಿಕೆ ಇಲ್ಲವಾಗಿದೆ. ನಾವೇಕೆ ಮೇಲೆ ಬಿದ್ದು ಯಾಕೆ ಪ್ರಚಾರ ಮಾಡಬೇಕು ? ಅವರಾದ್ರೂ ಒಂದು ಮಾತು ಬನ್ನಿ ಒಟ್ಟಿಗೆ ಸೇರಿ ಕೆಲಸ ಮಾಡೋಣ ಅಂದ್ರೆ ನಾವು ಆಗಲ್ಲ ಅಂತಿದ್ವಾ? ಎಂದು ಪ್ರಶ್ನಿಸಿದರು. ಅಲ್ಲದೇ ಈಗೇನೋ ಕಷ್ಟಪಟ್ಟು ಕೆಲಸ ಮಾಡ್ತೇವೆ. ಚುನಾವಣೆಯಲ್ಲಿ ಗೆದ್ದ ಮೇಲೆ ನಮ್ಮನ್ನ ಕಣ್ಣೆತ್ತಿಯೂ ನೋಡಲ್ಲ ಎಂದು ತಮ್ಮ ಅಸಮಾಧಾನ ಹೊರ ಹಾಕಿದರು. ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಸಮಸ್ಯೆ ಬೇಕಾದರೇ ಬಗೆಹರಿಸೋಣ. ಇದು ಒಂದು ಕ್ಷೇತ್ರದ ಪ್ರಶ್ನೆಯಲ್ಲ. ದೇಶದ ಹಿತಾಸಕ್ತಿಯ ಪ್ರಶ್ನೆ. ಹಾಗಾಗಿ ಎಲ್ಲ ನಾಯಕರು ಒಟ್ಟಾಗಿ ಮೈತ್ರಿ ಅಭ್ಯರ್ಥಿ ನಿಖಿಲ್ ಪರವಾಗಿ ಕೆಲಸ ಮಾಡಿ ಎಂದಿದ್ದಾರೆ. ಒಂದು ವೇಳೆ ಅದು ಸಾಧ್ಯವಾಗದಿದ್ದರೆ ತಟಸ್ಥವಾಗಿದ್ದು ಬಿಡಿ. ಇಲ್ಲದೇ ಹೋದರೆ ಕಾಂಗ್ರೆಸ್​ ಬಿಟ್ಟೋಗಿ. ಆದರೆ, ಪಕ್ಷದ ವಿರುದ್ಧವಾಗಿ ನಡೆದು ಕೆಂಗೆಣ್ಣಿಗೆ ಗುರಿಯಾಗಬೇಡಿ ಎಂದು ಕಾಂಗ್ರೆಸ್ ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

About the author

ಕನ್ನಡ ಟುಡೆ

Leave a Comment