ಸುದ್ದಿ

ನಿತ್ಯಾನಂದ ಸ್ವಾಮೀಜಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ಬಿಡದಿಯ ನಿತ್ಯಾನಂದ ಆಶ್ರಮದ ನಿತ್ಯಾನಂದ ಸ್ವಾಮೀಜಿ ರಾಮನಗರದ ಅಧೀನ ನ್ಯಾಯಾಲಯ ತಮ್ಮ ಅರ್ಜಿ ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ನಿತ್ಯಾನಂದ ಸ್ವಾಮೀಜಿ ಸೇರಿ ಐವರು ಆರೋಪಿಗಳು ಸಲ್ಲಿಸಿರುವ ಅರ್ಜಿ ನಿನ್ನೆ ನ್ಯಾ.ಆರ್‌.ಬಿ.ಬೂದಿಹಾಳ್‌ ಅವರಿದ್ದ ಏಕಸದಸ್ಯಪೀಠದ ಮುಂದೆ ವಿಚಾರಣೆಗೆ ಬಂದಿತು. ಕೆಲ ಕಾಲ ವಾದ ಗಮಿನಿಸಿದ ಬಳಿಕ ನ್ಯಾಯಪೀಠ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.

8ವರ್ಷಗಳಷ್ಟು ಹಳೆಯದಾದ ತಮ್ಮ ವಿರುದ್ಧದ ಅತ್ಯಾಚಾರ ಆರೋಪಗಳನ್ನು ಕೈಬಿಡುವಂತೆ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯನ್ನು 2018ರ ಫೆ.19ರಂದು ವಜಾಗೊಳಿಸಿದ್ದ ರಾಮನಗರ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಆರೋಪ ಗಮನಿಸುವಂತೆ ಆದೇಶ ನೀಡಿತ್ತು.

2017ರ ಡಿಸೆಂಬರ್‌ನಲ್ಲಿ ಅರ್ಜಿ ಕುರಿತು ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಪೀಠ ಫೆ.19ರಂದು ದಿಢೀರ್‌ ಆದೇಶ ನೀಡಲಾಗಿದೆ. ತಾವು ಮತ್ತೆ ಹೊಸದಾಗಿ ವಿಚಾರಣೆ ನಡೆಸುವಂತೆ ಮಾಡಿದ್ದ ಮನವಿಯನ್ನೂ ಸಹ ತಿರಸ್ಕರಿಸಲಾಗಿದೆ.

 

About the author

ಕನ್ನಡ ಟುಡೆ

Leave a Comment