ರಾಷ್ಟ್ರ ಸುದ್ದಿ

ನಿರ್ಭಯಾ ಅತ್ಯಾಚಾರಿಗಳಿಗೆ ಶೀಘ್ರಗತಿಯಲ್ಲಿ ನೇಣು: ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣ ದಂಡನೆ ಶಿಕ್ಷೆ ವಿಧಿಸಲ್ಪಟ್ಟಿರುವ 4 ಅಪರಾಧಿಗಳನ್ನು ಶೀಘ್ರಗತಿಯಲ್ಲಿ ಗಲ್ಲಿಗೇರಿಸಬೇಕೆಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ತಿರಸ್ಕರಿಸಿದೆ.
ನಿರ್ಭಯಾ ಪ್ರಕರಣದಲ್ಲಿ ಮರಣ ದಂಡನೆ ಶಿಕ್ಷೆ ವಿಧಿಸಲ್ಪಟ್ಟಿರುವ 4 ಜನ ಅಪರಾಧಿಗಳಿಗೆ ಶೀಘ್ರಗತಿಯಲ್ಲಿ ನೇಣು ಶಿಕ್ಷೆ ಜಾರಿ ಮಾಡಜುವಂತೆ ಕೋರಿ ವಕೀಲ ಎ.ಎ. ಶ್ರೀವಾಸ್ತವ ಅವರು ಅರ್ಜಿ ಸಲ್ಲಿಸಿದ್ದರು. ಶಿಕ್ಷೆ ಜಾರಿ ವಿಳಂಬದಿಂದಾಗಿ ದೇಶದಲ್ಲಿ ಅತ್ಯಾಚಾರಿಗಳಿಗೆ ಭಯವಿಲ್ಲದಂತಾಗಿದೆ. ಪತ್ರಿಕೆಗಳಲ್ಲಿ ನಿರಂತರವಾಗಿ ಅತ್ಯಾಚಾರ ಪ್ರಕರಣಗಳ ಸುದ್ದಿ ಪ್ರಕಟಕೊಳ್ಳುತ್ತಿರುವುದೇ ಇದಕ್ಕೆ ಸಾಕ್ಷಿ ಎಂದು ತಿಳಿಸಿದ್ದರು.
ಈ ಅರ್ಜಿಯನ್ನು ವಜಾಗೊಳಿಸರುವ ನ್ಯಾಯಮೂರ್ತಿಗಳಾದ ಮದನ್ ಬಿ ಲೋಕುರ್ ಹಾಗೂ ದೀಪಕ್ ಗುಪ್ತ ಅವರಿದ್ದ ಪೀಠ, ಯಾವ ರೀತಿಯ ಮನವಿಯನ್ನು ನೀವು ಮಾಡುತ್ತಿದ್ದೀರಿ? ನ್ಯಾಯಾಲಯವನ್ನು ನೀವು ತಮಾಷೆ ಮಾಡುತ್ತಿದ್ದೀರಿ ಎಂದು ಹೇಳಿದೆ.

About the author

ಕನ್ನಡ ಟುಡೆ

Leave a Comment