ರಾಜ್ಯ ಸುದ್ದಿ

ನೀರು ಹಂಚಿಕೆ ವಿವಾದ: ಶೀಘ್ರದಲ್ಲೇ ಮಹಾರಾಷ್ಟ್ರಕ್ಕೆ ಕರ್ನಾಟಕದ ನಿಯೋಗ ಭೇಟಿ

ಬೆಳಗಾವಿ: ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ, ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದೆ ಎಂದು ತಿಳಿದುಬಂದಿದೆ.
ಮಹಾರಾಷ್ಟ್ರ ರಾಜ್ಯಕ್ಕೆ ಭೇಟಿ ನೀಡುವ ಕರ್ನಾಟಕದ ನಿಯೋಗ ಅಲ್ಲಿನ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರನ್ನು ಭೇಟಿ ಮಾಡಿ ಉಭಯ ರಾಷ್ಟ್ರಗಳ ನೀರು ಹಂಚಿಕೆ ವಿವಾದ ಕುರಿತು ಮಾತುಕತೆ ನಡೆಸಲಿವೆ ಎಂದು ವರದಿಗಳು ತಿಳಿಸಿವೆ. ಪ್ರತೀ ವರ್ಷ ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳು ಏಪ್ರಿಲ್, ಮೇ ಹಾಗೂ ಜೂನ್ ತಿಂಗಳಿನಲ್ಲಿ ನೀರು ಕೊರತೆಯಿಂದ ಸಂಕಷ್ಟವನ್ನು ಅನುಭವಿಸುತ್ತಿರುತ್ತದೆ ಎಂದು ಅಧಿವೇಶನದ ವೇಳೆ ಮಹಂತೇಶ್ ಕೌಜಲಗಿ ಮಠ್ ಅವರು ಪ್ರಶ್ನೆ ಮಾಡಿದರು. ಈ ವೇಳೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ಪರವಾಗಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, ನೀರು ಸಮಸ್ಯೆ ಪರಿಹರಿಸಲು ಮಹಾರಾಷ್ಟ್ರ ರಾಜ್ಯಕ್ಕೆ ನಿಯೋಗ ಭೇಟಿ ನೀಡುವಂತೆ ಮಾಡಲು ಸಚಿವರಿಗೆ ತಿಳಿಸಲಾಗುತ್ತದೆ ಎಂದು ಹೇಳಿದರು.

About the author

ಕನ್ನಡ ಟುಡೆ

Leave a Comment