ರಾಜ್ಯ ಸುದ್ದಿ

ನೀವೆಲ್ಲಾ ಏನ್ ಮಾಡ್ತಾ ಇದ್ದೀರಾ: ರಾಜ್ಯ ಬಿಜೆಪಿ ನಾಯಕರ ಮೇಲೆ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗರಂ

ಬೆಂಗಳೂರು: ಮೈತ್ರಿ ಸರ್ಕಾರ ಇಂದು ಬಜೆಟ್ ಮಂಡನೆ ಮಾಡಲು ಎಲ್ಲ ರೀತಿಯ ಸಿದ್ಧತೆ ನಡೆಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಅಧಿವೇಶನದಲ್ಲಿ ಬಜೆಟ್ ಮಂಡಿಸದೆ ಇರುವಂತೆ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರ ನಡುವೆ ಲೋಕಸಭಾ ಚುನಾವಣೆಯ ಸಿದ್ಧತೆ ಬಗ್ಗೆ ಚರ್ಚೆ ನಡೆಸಲು ಇಂದು ರಾಜ್ಯ ಬಿಜೆಪಿ ನಾಯಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮುನಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಜೆಪಿ ಕಚೇರಿಯಲ್ಲಿ ಸೋಷಿಯಲ್ ಮೀಡಿಯಾ ತಂಡದ ಜೊತೆ ಅಮಿತ್ ಶಾ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದು ರಾಜ್ಯ ಬಿಜೆಪಿ ನಾಯಕರಾದ ಕೆಎಸ್ ಈಶ್ವರಪ್ಪ, ಸಿಟಿ ರವಿ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಮತ್ತಿತ್ತರರು ಪಾಲ್ಗೊಂಡಿದ್ದರು. ಲೋಕಸಭೆ ಚುನಾವಣೆಗೆ ರಾಜ್ಯ ಬಿಜೆಪಿ ತಯಾರಿ ಸರಿಯಾದ ದಿಕ್ಕಿನಲ್ಲಿ ಹೋಗುತ್ತಿಲ್ಲ ಎಂದು ಮುನಿಸಿಕೊಂಡಿರುವ ಅಮಿತ್ ಶಾಗೆ ಒಂದು ಲಕ್ಷ ಬೈಕ್ ರ್ಯಾಲಿಗೆ ತಯಾರಿ ಮಾಡಿದ್ದೇವೆ ಎಂದು ಅರುಣ್ ಕುಮಾರ್ ಸಮಜಾಯಿಷಿ ನೀಡಲು ಹೋದರು. ಅರುಣ್ ಮಾತಿನಿಂದ ಸಿಟ್ಟಾದ ಅಮಿತ್ ಶಾ, ಕರ್ನಾಟಕದಲ್ಲಿ ಕೇವಲ ಒಂದು ಲಕ್ಷ ಜನರ ಬೈಕ್ ರ್ಯಾಲಿನಾ? ನೀವೆಲ್ಲಾ ಏನ್ ಮಾಡ್ತಾ ಇದ್ದೀರಿ? ಗಂಭೀರವಾಗಿ ಕೆಲಸ ಆರಂಭ ಮಾಡುವುದು ಯಾವಾಗ? ಎಂದು ಅಮಿತ್ ಶಾ ಪ್ರಶ್ನಿಸಿದ್ದಾರೆ.

About the author

ಕನ್ನಡ ಟುಡೆ

Leave a Comment