ರಾಜ್ಯ ಸುದ್ದಿ

ನೆಲಕ್ಕೆ ಬಿದ್ದ ವಿದ್ಯುತ್​ ತಂತಿ ಸ್ಪರ್ಶಿಸಿ ಇಬ್ಬರು ಸಾವು

ಧಾರವಾಡ: ನೆಲಕ್ಕೆ ಬಿದ್ದಿದ್ದ ವಿದ್ಯುತ್​ ತಂತಿ ತಗುಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಧಾರವಾಡ ತಾಲೂಕಿನ ಕ್ಯಾರಕೊಪ್ಪದಲ್ಲಿ ಘಟನೆ ನಡೆದಿದ್ದು, ಶಿವಯ್ಯ ಪೂಜಾರ(45), ಮುತ್ತು ಪೂಜಾರ(25) ಮೃತರೆಂದು ಗುರುತಿಸಲಾಗಿದೆ. ಭತ್ತಕ್ಕೆ ಗೊಬ್ಬರ ಹಾಕಲು ಹೋದಾಗ ಅವಘಡ ಸಂಭವಿಸಿದೆ. ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

About the author

ಕನ್ನಡ ಟುಡೆ

Leave a Comment