ರಾಜ್ಯ ಸುದ್ದಿ

ನೈಸ್ ವಿರುದ್ಧ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಮಾಜಿ ಪ್ರಧಾನಿ ದೇವೇಗೌಡ ಒತ್ತಾಯ

ಬೆಂಗಳೂರು: ಬೆಂಗಳೂರು ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್(ಬಿಎಂಐಸಿ) ಮತ್ತು ಅದರ ಪ್ರಚಾರಕ ಕಂಪೆನಿ ನೈಸ್ (ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರಾಜೆಕ್ಟ್ )ವಿರುದ್ಧ ಪ್ರತಿಭಟನೆ ಹಿಂತತೆಗೆದುಕೊಳ್ಳುವ ಇಂಗಿತವನ್ನು ಎರಡು ವರ್ಷಗಳ ಹಿಂದೆ ವ್ಯಕ್ತಪಡಿಸಿದ್ದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಇದೀಗ ಮತ್ತೆ ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳಲು ಮುಂದಾಗಿದ್ದಾರೆ.

ಹೊಸಕೆರೆಹಳ್ಳಿ ಲೇ ಔಟ್ ಹತ್ತಿರ ನಿವಾಸಿಗಳ ಸಂಕಷ್ಟಕ್ಕೆ ನೈಸ್ ಸಂಸ್ಥೆಯೇ ಕಾರಣ ಎಂದು ಆರೋಪಿಸಿರುವ ದೇವೇಗೌಡ, ವಸಚಿ ಸಮಿತಿ ವರದಿಯ ಶಿಫಾರಸಿನ ಆಧಾರದ ಮೇಲೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ನೈಸ್ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಬೆಂಗಳೂರಿನ ಹೊಸಕೆರೆಹಳ್ಳಿಯ ಹತ್ತಿರ ಪ್ರಮೋದ್ ಲೇ ಔಟ್ ನ ನಿವಾಸಿಗಳನ್ನು ದೇವೇಗೌಡರು ನಿನ್ನೆ ಭೇಟಿ ಮಾಡಿದ್ದರು.

ಈ ಸಂದರ್ಭದಲ್ಲಿ ಅಲ್ಲಿನ ನಿವಾಸಿಗಳು ತಮಗೆ ನೈಸ್ ಅಧಿಕಾರಿಗಳಿಂದ ನಿತ್ಯ ಕಿರುಕುಳ ಉಂಟಾಗುತ್ತಿರುವುದಲ್ಲದೆ ಮೂಲಭೂತ ಸೌಕರ್ಯಗಳಿಗೂ ಇಲ್ಲಿ ಕೊರತೆಯಿದೆ ಎಂದು ತಮ್ಮ ಸಂಕಷ್ಟವನ್ನು ತೋಡಿಕೊಂಡಿದ್ದರು. ಪ್ರಮೋದ ಲೇ ಔಟ್ ನಲ್ಲಿ 17 ಎಕರೆ ಮತ್ತು ಹೊಸಕೆರೆಹಳ್ಳಿಯಲ್ಲಿ 50 ಎಕರೆಯನ್ನು ನೈಸ್ ರಸ್ತೆಗೆ ವಶಪಡಿಸಿಕೊಳ್ಳಲಾಗಿತ್ತು. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಭೂಮಿ ಕಳೆದುಕೊಂಡವರಿಗೆ ಬೇರೆ ಕಡೆ ಭೂಮಿ ನೀಡಲು ಸಾಧ್ಯವಿಲ್ಲ ಎಂದು ಘೋಷಿಸಿದ್ದರು. ಬೇರೆ ಬೇರೆ ಮುಖ್ಯಮಂತ್ರಿಗಳ ಆಳ್ವಿಕೆ ಸಮಯದಲ್ಲಿ ನಡೆದ ಅಕ್ರಮಗಳ ಬಗ್ಗೆ ನನಗೆ ಗೊತ್ತಿದೆ ಎಂದು ದೇವೇಗೌಡರು ಗುಡುಗಿದ್ದಾರೆ.

About the author

ಕನ್ನಡ ಟುಡೆ

Leave a Comment