ರಾಷ್ಟ್ರ

ನ್ಯಾ.ಲೋಯಾರನ್ನು ಭಾರತ ಎಂದಿಗೂ ಮರೆಯುವುದಿಲ್ಲ : ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ

ನವದೆಹಲಿ: ನ್ಯಾಯಮೂರ್ತಿ ಬಿ.ಹೆಚ್. ಲೋಯಾ ಅವರನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಇಂದು ಹೇಳಿದ್ದಾರೆ. ಈ ಕುರಿತಂತೆ ಟ್ವಿಟರ್ ನಲ್ಲಿ ಬರೆದಿರುವ ರಾಹುಲ್ ಗಾಂಧಿಯವರು, ಲೋಯಾ ಅವರ ನಿಗೂಢ ಸಾವು ಕುರಿತಂತೆ ಕೆಲ ಭರವಸೆಗಳಿದ್ದವು. ಸತ್ಯ ಹೊರಬರಲಿದೆ ಎಂದು ಕೋಟ್ಯಾಂತರ ಭಾರತೀಯರು ಕಾಯುತ್ತಿದ್ದರು. ಆದರೆ ಇದೀಗ ಆ ಭರವಸೆಗಳೂ ಕೂಡ ಇಲ್ಲದಂತಾಗಿದೆ ಎಂದು ಲೋಯಾ ಅವರ ಕುಟುಂಬಸ್ಥರು ಹೇಳಿದ್ದಾರೆ.

ಆದರೆ ನಾನು ಲೋಯಾ ಕುಟುಂಬಸ್ಥರಿಗೆ ಹೇಳಲು ಬಯಸುತ್ತೇನೆ ಈಗಲೂ ಭರವಸೆಗಳಿವೆ… ಏಕೆಂದರೆ ಕೋಟ್ಯಾಂತರ ಭಾರತೀಯರು ಸತ್ಯವನ್ನು ನೋಡಲು ಬಯಸುತ್ತಿದ್ದಾರೆ. ಲೋಯಾ ಅವರನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ. ಸೊಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣ ಕುರಿತು ಲೋಯಾ ಅವರು ವಿಚಾರಣೆ ನಡೆಸುತ್ತಿದ್ದರು. ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೂಡ ಆರೋಪಿಯಾಗಿದ್ದರು. ಲೋಯಾ 2014ರ ಡಿಸೆಂಬರ್ ನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು ಎಂದು ಹೇಳಲಾಗುತ್ತಿತ್ತು.

ಇದಾದ ಕೆಲವೇ ದಿನಗಳಲ್ಲಿ ಶಾ ಅವರನ್ನು ಪ್ರಕರಣದಿಂದ ಆರೋಪಮುಕ್ತಗೊಳಿಸಲಾಗಿತ್ತು. ಈ ನಿಗೂಢ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂಬ ಆಗ್ರಹ ದೇಶದಾದ್ಯಂತ ಕೇಳಿ ಬಂದಿತ್ತು. ಆದರೆ ಯಾವುದೇ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವುದನ್ನು ಕಾಂಗ್ರೆಸ್ ಹಾಗೂ ಇತರೆ ವಿರೋಧ ಪಕ್ಷಗಳು ತೀವ್ರವಾಗಿ ವಿರೋಧಿಸಿದ್ದರು. ಭಾರತದ ನ್ಯಾಯಾಂಗ ಇತಿಹಾಸ ಅತ್ಯಂತ ಕರಾಳ ದಿನ ಎಂದು ಬಣ್ಣಿಸಿದ್ದವು ಎಂದು ಹೇಳಿದರು.

 

About the author

ಕನ್ನಡ ಟುಡೆ

Leave a Comment