ಕ್ರೀಡೆ

ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಯಿಂದ ರೋಹಿತ್ ಶರ್ಮಾಗೆ ವಿಶ್ರಾಂತಿ

ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯನ್ನು ಗೆಲ್ಲಿಸಿಕೊಟ್ಟಿದ್ದ ರೋಹಿತ್ ಶರ್ಮಾಗೆ ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ರೋಹಿತ್ ಶರ್ಮಾಗೆ ಆಟದ ಒಟ್ಟದ ಹೆಚ್ಚಾಗುತ್ತಿರುವ ಕಾರಣ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ರೋಹಿತ್ ಶರ್ಮಾಗೆ ನ್ಯೂಜಿಲೆಂಡ್ ಎ ತಂಡದ ವಿರುದ್ಧದ ಟೆಸ್ಟ್ ಸರಣಿಗೆ ವಿಶ್ರಾಂತಿ ನೀಡಲು ತೀರ್ಮಾನಿಸಿದೆ. ಟೀಂ ಇಂಡಿಯಾ ಎ ತಂಡಕ್ಕೆ ರೋಹಿತ್ ಶರ್ಮಾರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಬಿಸಿಸಿಐ ವೈದ್ಯಕೀಯ ತಂಡ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡುವುದು ಸೂಕ್ತ ಎಂದು ಸಲಹೆ ನೀಡಿದ್ದರಿಂದ ಆಯ್ಕೆ ಸಮಿತಿ ಈ ನಿರ್ಧಾರಕ್ಕೆ ಬಂದಿದೆ. ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಗಾಗಿ ರೋಹಿತ್ ಶರ್ಮಾ ಶುಕ್ರವಾರ ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಲಿದ್ದಾರೆ. ನವೆಂಬರ್ 21ರಿಂದ ಟಿ20 ಕ್ರಿಕೆಟ್ ಪಂದ್ಯದ ಮೂಲಕ ಸರಣಿ ಆರಂಭವಾಗಲಿದೆ.

About the author

ಕನ್ನಡ ಟುಡೆ

Leave a Comment