ರಾಜ್ಯ ಸುದ್ದಿ

ನ.5ರೊಳಗೆ ಗೋಕರ್ಣ ದೇವಸ್ಥಾನವನ್ನು ಮಠಕ್ಕೆ ಹಸ್ತಾಂತರಿಸಿ: ಸುಪ್ರೀಂ ಕೋರ್ಟ್

ಕಾರವಾರ: ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ಸಂಪೂರ್ಣ ಆಡಳಿತವನ್ನು ನವೆಂಬರ್ 5ರೊಳಗೆ ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ರಾಮಚಂದ್ರಾಪುರ ಮಠ, ಕಳೆದ ಅಕ್ಟೋಬರ್ 3ರಂದು ದೇವಾಲಯದ ಆಡಳಿತವನ್ನು ಸಂಪೂರ್ಣವಾಗಿ ಮಠಕ್ಕೆ ಹಸ್ತಾಂತರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಆದರೆ ಜಿಲ್ಲಾಡಳಿತ ನ್ಯಾಯಾಲಯದ ಆದೇಶವನ್ನು ಪಾಲಿಸಿಲ್ಲ. ಇದಕ್ಕೆ ರಾಮಚಂದ್ರಾಪುರ ಮಠ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತು, ಅದಕ್ಕೆ ನಿನ್ನೆ ಆದೇಶ ನೀಡಿದ ಸುಪ್ರೀಂ ಕೋರ್ಟ್ ಸೋಮವಾರದೊಳಗೆ ದೇವಸ್ಥಾನದ ಆಡಳಿತವನ್ನು ಹಸ್ತಾಂತರಿಸುವಂತೆ ಸರ್ಕಾರಕ್ಕೆ ಆಜ್ಞೆ ಮಾಡಿದೆ ಎಂದಿದೆ.

ಗೋಕರ್ಣ ಮಠದ ಸ್ಥಿರಾಸ್ತಿ ಮತ್ತು ಚರಾಸ್ತಿಗಳೆರಡನ್ನೂ ಸಂಪೂರ್ಣವಾಗಿ ಮಠಕ್ಕೆ ಹಸ್ತಾಂತರಿಸುವಂತೆ ಸರ್ಕಾರಕ್ಕೆ ತಿಳಿಸಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಐತಿಹಾಸಿಕ ಗೋಕರ್ಣ ಮಹಾಬಲೇಶ್ವರ ದೇವಸ್ಥಾನವನ್ನು ಅಲ್ಲಿನ ಟ್ರಸ್ಟಿಗಳು ಅನೇಕ ವರ್ಷಗಳ ಕಾಲ ಆಡಳಿತ ನಡೆಸುತ್ತಿದ್ದರು. 2008ರ ಆಗಸ್ಟ್ 12ರಂದು ಅಂದಿನ ಬಿಜೆಪಿ ಸರ್ಕಾರ ದೇವಸ್ಥಾನದ ಆಡಳಿತವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಲು ನಿರ್ಧರಿಸಿತು. ಸರ್ಕಾರದ ನಿರ್ಧಾರವನ್ನು 10 ವರ್ಷಗಳ ನಂತರ ತೆಗೆದುಹಾಕಿದ ರಾಜ್ಯ ಹೈಕೋರ್ಟ್ ದೇವಸ್ಥಾನದ ಆಡಳಿತವನ್ನು ಸರ್ಕಾರಕ್ಕೆ ಹಿಂತಿರುಗಿಸುವಂತೆ ಆದೇಶ ನೀಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಮಚಂದ್ರಾಪುರ ಮಠ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

About the author

ಕನ್ನಡ ಟುಡೆ

Leave a Comment