ರಾಜ್ಯ ಸುದ್ದಿ

ಪಂಪ್’ಸೆಟ್’ಗೆ 10 ಗಂಟೆಗಳ 3 ಫೇಸ್ ವಿದ್ಯುತ್: ಸಿಎಂ ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ 100ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಇರುವುದರಿಂದ ನೀರಾವರಿ ಪಂಪ್ ಸೆಟ್ ಗಳಿಗೆ 10 ತಾಸುಗಳ 3 ಫೇಸ್ ವಿದ್ಯುತ್ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಇಂಧನ ಖಾತೆಯ ಹೊಣೆಯನ್ನೂ ಹೊತ್ತಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಮಂಗಳವಾರ ಭರವಸೆ ನೀಡಿದ್ದಾರೆ.
ವಿಧಾನಮಂಡಲ ಅಧಿವೇಶನದ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಎಂ.ಎಸ್. ಸೋಮಲಿಂಗಪ್ಪ ಅವರ ಪ್ರಶ್ನೆಗೆ ಉತ್ತರ ನೀಡುವ ವೇಲೆ ವಿರೋಧ ಪಕ್ಷದ ನಾಯಕ ಯಡಿಯೂರಪ್ಪ ಅವರ ಸಲಹೆಯನ್ನು ಪರಿಗಣಿಸಿದ ಕುಮಾರಸ್ವಾಮಿಯವರು ಈ ಭರವಸೆಯನ್ನು ನೀಡಿದ್ದಾರೆ. ರಾಜ್ಯದ್ಯಂತ ಈಗಾಗಲೇ ಕೊಪ್ಪಳ, ರಾಯಚೂರು ಜಿಲ್ಲೆಯಲ್ಲಿ 10-11 ಗಂಟೆ ಕಾಲ 3 ಫೇಸ್ ವಿದ್ಯುತ್ ಅನಧಿಕೃತವಾಗಿ ನೀಡಲಾಗುತ್ತಿದೆ .ಆದರೆ, ಹೆಚ್ಚು ವಿದ್ಯುತ್ ನೀಡುವುದರಿಂದ ಅಂತರ್ಜಲ ಖಾಲಿ ಆಗಿ ಸಮಸ್ಯೆಯಾಗುತ್ತದೆ ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ. ಇದೀಗ ವಿದ್ಯುತ್ ನೀಡಿದರೆ ರೈತರ ಬೆಳೆ ಉಳಿಸಿಕೊಳ್ಳಲು ಅನುವಾಗುತ್ತದೆ ಎಂದು ಯಡಿಯೂರಪ್ಪ ಸಲಹೆ ನೀಡಿದ್ದಾರೆ. ಹೀಗಾಗಿ ರಾಜ್ಯದ್ಯಂತ 10 ಗಂಟೆಗಳ 3 ಫೇಸ್ ವಿದ್ಯುತ್ ನೀಡುವ ಬಗ್ಗೆ ಚರ್ಚಿಸಲಾಗುವುದು. ಜೊತೆಗೆ ರೈತರ ಪಂಪ್ ಸೆಟ್’ಗಳ ಸಕ್ರಮಗೊಳಿಸುವ 10 ಸಾವಿರ ಸುಲ್ಕ ಮನ್ನಾ ಬಗ್ಗೆಯೂ ಪರಿಶೀಲಿಸಲಾಗುವುದು ಎಂದರು.

About the author

ಕನ್ನಡ ಟುಡೆ

Leave a Comment