ರಾಜ್ಯ ಸುದ್ದಿ

ಪಕ್ಷ ವಿರೋಧಿ ಚಟುವಟಿಕೆ ಆರೋಪ: ಮಂಡ್ಯ ಜಿಲ್ಲೆಯ ಏಳು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರ ವಜಾ

ಮಂಡ್ಯ: ಮೈತ್ರಿ ಪಕ್ಷದ ಅಭ್ಯರ್ಥಿ ವಿರುದ್ಧ ಕೆಲಸ ಮಾಡುತ್ತಿರುವುದಾಗಿ ಸ್ಥಳೀಯ ಮುಖಂಡರು ನೀಡಿದ ದೂರಿನ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಏಳು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ. ವೈ. ಘೋರ್ಪಡೆ ಅವರು ವಜಾಗೊಳಿಸಿ ಆದೇಶಿಸಿದ್ದಾರೆ.

ಮಂಡ್ಯ ಗ್ರಾಮಾಂತರ ಬ್ಲಾಕ್‌ ಮಂಡ್ಯ ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್.ಅಪ್ಪಾಜಪ್ಪ, ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎ.ಎಸ್‌.ರಾಜೀವ್‌, ಮಳವಳ್ಳಿ ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪುಟ್ಟರಾಮು, ಮಳವಳ್ಳಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜೆ.ದೇವರಾಜ್, ನಾಗಮಂಗಲ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ಪ್ರಸನ್ನ, ಕೆ.ಆರ್‌.ಪೇಟೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆ.ಆರ್.ರವೀಂದ್ರ ಬಾಬು, ಮೇಲುಕೋಟೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಸ್.ಬಿ.ಪ್ರಕಾಶ್‌ ವಜಾಗೊಂಡಿದ್ದಾರೆ.

ಕೆಪಿಸಿಸಿ
ಪಕ್ಷ ವಿರೋಧಿ ಚಟುವಟಿಕೆಯಿಂದ ಪಕ್ಷದ ಶಿಸ್ತನ್ನು ಉಲ್ಲಂಘಿಸುತ್ತಿರುವ ಕಾರಣಕ್ಕಾಗಿ ಅಧ್ಯಕ್ಷರ ಆದೇಶದ ಮೇರೆಗೆ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾ‍‍ರ್ಯದಶಿ ವಿ.ವೈ. ಘೋರ್ಪಡೆ ಆದೇಶದ ಪ್ರತಿಯಲ್ಲಿ ತಿಳಿಸಿದ್ದಾರೆ. ದೇಶಾದ್ಯಂತ ಇಂದಿನಿಂದ ( ಏಪ್ರಿಲ್ 11,2019)ರಿಂದ ಲೋಕಸಭೆ ಚುನಾವಣೆ ಆರಂಭವಾಗಿದ್ದು, ರಾಜ್ಯದಲ್ಲಿ ಏಪ್ರಿಲ್ 18 ಹಾಗೂ ಏಪ್ರಿಲ್ 23ರಂದು ಮತದಾನ ನಡೆಯಲಿದೆ.

 

About the author

ಕನ್ನಡ ಟುಡೆ

Leave a Comment