ರಾಷ್ಟ್ರ ಸುದ್ದಿ

ಪನಾಮ ಪೇಪರ್ ಹಗರಣದಲ್ಲಿ ಮಧ್ಯ ಪ್ರದೇಶ ಸಿಎಂ ಹೆಸರಿಲ್ಲ: ರಾಹುರ್ ಗಾಂಧಿ ಗೊಂದಲದ ಹೇಳಿಕೆ

ನವದೆಹಲಿ: ದೇಶದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಹತ್ತಿರವಿರುವಾಗಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ನೀಡಿರುವ ಹೇಳಿಕೆಯೊಂದು ಇದೀಗ ಕಾಂಗ್ರೆಸ್ ಪಕ್ಷವನ್ನು ತೀವ್ರ ಮುಜುಗರ ಪಡುವಂತೆ ಮಾಡಿದೆ.
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಮೇಲೆ ಭ್ರಷ್ಟಾಚಾರ ಆರೋಪ ಮಾಡುವ ಭರದಲ್ಲಿ ರಾಹುಲ್ ಆವರು ಗೊಂದಲದ ಹೇಳಿಕೆಯೊಂದನ್ನು ನೀಡಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಸರ್ಕಾರ ಕಂಠಪೂರ್ತಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ಬಿಜೆಪಿ ವಿರುದ್ಧ ಸಾಕಷ್ಟು ಭ್ರಷ್ಟಾಚಾರಗಳನ್ನು ಮಾಡುತ್ತಿದೆ. ನಿನ್ನೆಯಷ್ಟೇ ನಾನು ಗೊಂದಲಕ್ಕೀಡಾಗಿದ್ದೆ. ಪನಾಮಾ ಹಗರಣದಲ್ಲಿ ಭಾಗಿಯಾಗದ ಮಧ್ಯಪ್ರದೇಶ ಮುಖ್ಯಮಂತ್ರಿಗಳು ವ್ಯಾಪಂ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಹೇಳಿದ್ದಾರೆ. ಈ ಹಿಂದೆ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿಯವರು ಪನಾಮಾ ಹಗರಣದಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿಗಳ ಪುತ್ರನ ಹೆಸರಿದೆ ಎಂದು ಹೇಳಿದ್ದರು. ನವೆಂಬರ್ ತಿಂಗಳಿನಲ್ಲಿ ಮಧ್ಯಪ್ರದೇಶದಲ್ಲಿ ಚುನಾವಣೆ ನಡೆಯಲಿದ್ದು, ಈ ನಡುವಲ್ಲೇ ಕಾಂಗ್ರೆಸ್ ಅಧ್ಯಕ್ಷನ ಈ ಹೇಳಿಕೆ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಇನ್ನು ರಾಹುಲ್ ಗಾಂಧಿಯವರ ಆರೋಪಕ್ಕೆ ತೀವ್ರವಾಗಿ ಕಿಡಿಕಾರಿರುವ ಚೌಹಾಣ್ ಅವರು, ವ್ಯಾಪಂ ಹಗರಣಕ್ಕೂ, ಪನಾಮಾ ಹಗರಣಕ್ಕೂ ತಳುಕು ಹಾಕಲಾಗುತ್ತಿದೆ. ಆರೋಪಗಳು ಹಸೀ ಸುಳ್ಳು ಎಂದು ಹೇಳಿದ್ದಾರೆ.

About the author

ಕನ್ನಡ ಟುಡೆ

Leave a Comment