ರಾಜ್ಯ ಸುದ್ದಿ

ಪರಮಪೂಜ್ಯ ಸಿದ್ಧಗಂಗಾ ಶ್ರೀಗಳು ಲಿಂಗೈಕ್ಯರಾಗಿದ್ದಾರೆ: ಸಿಎಂ

ತುಮಕೂರು: ತ್ರಿವಿಧ ದಾಸೋಹಿ, ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿದ್ದ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿ ಅವರು ಇಂದು ಲಿಂಗೈಕ್ಯರಾಗಿದ್ದು, ನಾಳೆ ಮಧ್ಯಾಹ್ನ 3 ಗಂಟೆಯವರೆಗೂ ಅಂತಿಮ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ ಅವರು, ವೈದ್ಯರ ಸತತ ಪರಿಶ್ರಮದ ಹೊರತಾಗಿಯೂ ಶ್ರೀಗಳು ಲಿಂಗೈಕ್ಯರಾಗಿದ್ದಾರೆ. ಜವರಾಯನ ಜೊತೆಯಲ್ಲಿ ಸಸತ ಹೋರಾಟ ಮಾಡಿದ್ದ ಶ್ರೀಗಳು ಇಂದು ಬೆಳಗ್ಗೆ 11.44ರಲ್ಲಿ ಲಿಂಗೈಕ್ಯರಾಗಿದ್ದಾರೆ ಎಂದು ಹೇಳಿದರು.
ಇದೇ ವೇಳೆ ನಾಳೆ ಮಧ್ಯಾಹ್ನ 3 ಗಂಟೆಯವರೆಗೂ ಶ್ರೀಮಠದ ಆವರಣದಲ್ಲಿ ಶ್ರೀಗಳ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಶ್ರೀಗಳ ಅಸಂಖ್ಯ ಭಕ್ತಗಣ ಶಾಂತ ರೀತಿಯಲ್ಲಿ ಅಂತಿಮ ದರ್ಶನ ಪಡೆಯಬೇಕು. ನಾಳೆ 3 ಗಂಟೆಯ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಶ್ರೀಗಳ ಅಂತಿಮ ವಿಧಿವಿಧಾನ ನಡೆಸಲಾಗುತ್ತದೆ ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.

About the author

ಕನ್ನಡ ಟುಡೆ

Leave a Comment