ರಾಜ್ಯ ಸುದ್ದಿ

ಪಾಂಡವಪುರ ಬಳಿ ವಿ.ಸಿ. ನಾಲೆಗೆ ಬಸ್​ ಉರುಳಿ 20 ಪ್ರಯಾಣಿಕರ ಸಾವು

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕು ಕನಗನಮರಡಿ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್​ ವಿ.ಸಿ.ನಾಲೆಗೆ ಉರುಳಿ ಸುಮಾರು 20 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ದುರಂತದಲ್ಲಿ ಮೃತಪಟ್ಟವರಲ್ಲಿ ಐದಕ್ಕೂ ಹೆಚ್ಚು ಮಕ್ಕಳು ಸೇರಿದ್ದು, ಬಸ್‌ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. 35ಕ್ಕೂ ಹೆಚ್ಚು ಮಂದಿ ಬಸ್​​ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಪಾಂಡವಪುರದಿಂದ ಕನಗನಮರಡಿ ಮಾರ್ಗವಾಗಿ ಮಂಡ್ಯಕ್ಕೆ ತೆರಳುತ್ತಿದ್ದ ಬಸ್‌ ಚಾಲಕನ ನಿರ್ಲಕ್ಷ್ಯದಿಂದ ನಿಯಂತ್ರಣ ತಪ್ಪಿ ತುಂಬಿ ಹರಿಯುತ್ತಿದ್ದ ನಾಲೆಗೆ ಉರುಳಿದೆ. ನಾಲೆಗೆ ತಡೆಗೋಡೆ ಇಲ್ಲದಿರುವುದೂ ಬಸ್​ ಸುಲಭವಾಗಿ ನಾಲೆಗೆ ಉರುಳಲು ಕಾರಣ ಎನ್ನಲಾಗಿದೆ. ಈಗಾಗಲೇ 10ಕ್ಕೂ ಹೆಚ್ಚು ಶವಗಳನ್ನು ಹೊರತೆಗೆಯಲಾಗಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ.

ಘಟನೆ ನಡೆಯುತ್ತಿದ್ದಂತೆ ಮಂಡ್ಯ ಉಸ್ತುವಾರಿ ಸಚಿವ ಸಿ ಎಸ್‌ ಪುಟ್ಟರಾಜು ಅವರು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸಿದ್ದಾರೆ.

 

About the author

ಕನ್ನಡ ಟುಡೆ

Leave a Comment