ಕ್ರೀಡೆ

ಪಾಕಿಸ್ತಾನಕ್ಕೆ ಕಾಶ್ಮೀರ ಬೇಡ, ಅದನ್ನು ನಿರ್ವಹಿಸುವ ತಾಕತ್ತು ಪಾಕ್‌ಗಿಲ್ಲ: ಶಾಹಿದ್ ಆಫ್ರಿದಿ

ಲಂಡನ್: ಕಾಶ್ಮೀರಕ್ಕಾಗಿ ಭಾರತ ಹಾಗೂ ಪಾಕಿಸ್ತಾನ ದಶಕಗಳಿಂದ ಬಡಿದಾಡಿಕೊಂಡು ಬರುತ್ತಿದ್ದು ಇಂತ ಕ್ಲಿಷ್ಟ ಸಮಸ್ಯೆ ನಿವಾರಣೆಗೆ ಮಾಜಿ ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸುಲಭ ಉಪಾಯ ಹೇಳಿದ್ದಾರೆ.
ಲಂಡನ್ ನಲ್ಲಿ ಮಾತನಾಡಿದ ಶಾಹಿದ್ ಆಫ್ರಿದಿ ಅವರು, ಪಾಕಿಸ್ತಾನ ಕಾಶ್ಮೀರಕ್ಕಾಗಿ ಬೇಡಿಕೆ ಇಡಬಾರದು. ಪಾಕ್ ಗೆ ನಾಲ್ಕು ಪ್ರಾಂತ್ಯಗಳನ್ನು ಆಳುವ ಶಕ್ತಿ ಇಲ್ಲ. ಅಲ್ಲದೆ ಕಾಶ್ಮೀರವನ್ನು ಸಮರ್ಥವಾಗಿ ಆಳುವ ತಾಕತ್ತು ಇಲ್ಲ ಹೇಳಿದ್ದು ಇದರಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕ್ ಸರ್ಕಾರ ಹಾಗೂ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಮುಜುಗರ ಉಂಟಾಗಿದೆ. ಪಾಕಿಸ್ತಾನ ದೇಶವನ್ನು ಏಕೀಕರಿಸಲು ಹಾಗೂ ಉಗ್ರಗಾಮಿಗಳಿಂದ ಸುರಕ್ಷಿತವಾಗಿರಿಸುವಲ್ಲಿ ವಿಫಲವಾಗಿದೆ. ಇನ್ನು ಕಾಶ್ಮೀರದಲ್ಲಿ ಜನರು ಸಾಯುತ್ತಿದ್ದಾರೆ ಇವುಗಳನ್ನು ನೋಡುತ್ತಿದ್ದರೆ ಮನಸ್ಸಿಗೆ ನೋವುಂಟಾಗುತ್ತದೆ ಎಂದು ಹೇಳಿದ್ದಾರೆ.
ಪಾಕಿಸ್ತಾನಕ್ಕೆ ಕಾಶ್ಮೀರ ಬೇಡ. ಆಗಂತ ಭಾರತಕ್ಕೆ ಕಾಶ್ಮೀರವನ್ನು ಬಿಟ್ಟುಕೊಡುವುದು ಬೇಡ. ಕಾಶ್ಮೀರವನ್ನು ಸ್ವಾತಂತ್ರ ದೇಶ ಮಾಡಿ. ಅಲ್ಲಿನ ಜನರು ಸಾಯುವುದು ಬೇಡ. ಮನುಷ್ಯತ್ವ ಜೀವಂತವಾಗಿರಬೇಕು ಎಂದು ಪತ್ರಕರ್ತರಿಗೆ ಹೇಳಿದ್ದಾರೆ.

About the author

ಕನ್ನಡ ಟುಡೆ

Leave a Comment