ರಾಜ್ಯ ಸುದ್ದಿ

ಪಿಎಂ ನರೇಂದ್ರ ಮೋದಿ ಚಿತ್ರ ಬಿಡುಗಡೆ ಬೇಡ: ಹೈಕೋರ್ಟ್‌ನಲ್ಲಿ ಅರ್ಜಿ

ಬೆಂಗಳೂರು : ಸಾರ್ವತ್ರಿಕ ಚುನಾವಣೆ ನಡೆಯುತ್ತಿರುವುದರಿಂದ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ‘ಪಿಎಂ ನರೇಂದ್ರ ಮೋದಿ’ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದೆಂದು ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ತುಮಕೂರು ಮೂಲದ ವಕೀಲ ಎಲ್‌.ರಮೇಶ್‌ ನಾಯಕ್‌ ಅರ್ಜಿ ಸಲ್ಲಿಸಿದ್ದು, ಅದು ನ್ಯಾಯಪೀಠದ ಮುಂದೆ ಇನ್ನು ವಿಚಾರಣೆಗೆ ಬರಬೇಕಿದೆ. ಅರ್ಜಿಯಲ್ಲಿ ಕೇಂದ್ರ ಚುನಾವಣಾ ಆಯೋಗ, ಮುಂಬೈನ ‘ಬ್ಲೂ ಲೋಟಸ್‌ ಪೊ›ಡಕ್ಷ ನ್‌’ನ ‘ಲೆಜೆಂಡ್‌ ಗ್ಲೋಬಲ್‌ ಸ್ಟುಡಿಯೊ’, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. 17ನೇ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ದೇಶಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದ್ದು, ಇಡೀ ಪ್ರಕ್ರಿಯೆ ಪೂರ್ಣಗೊಳ್ಳುವ ತನಕ ‘ಪಿಎಂ ನರೇಂದ್ರ ಮೋದಿ’ ಚಿತ್ರವನ್ನು ಕರ್ನಾಟಕದ ಯಾವುದೇ ಭಾಗದಲ್ಲಿ ಬಿಡುಗಡೆ ಮಾಡಬಾರದೆಂದು ಚಿತ್ರ ನಿರ್ಮಾಣ ಸಂಸ್ಥೆಗೆ ನಿರ್ದೇಶಿಸಬೇಕೆಂದು ಅರ್ಜಿದಾರರು ಕೋರಿದ್ದಾರೆ. ”2015ರ ಸುಪ್ರೀಂಕೋರ್ಟ್‌ ಮಾರ್ಗಸೂಚಿ ಹಾಗೂ ಭಾರತೀಯ ದಂಡ ಸಂಹಿತೆ 1980ರ ಸೆಕ್ಷ ನ್‌ 171 (ಎಚ್‌) ಅನುಸಾರ, ಚುನಾವಣೆ ಸಂದರ್ಭದಲ್ಲಿ ಯಾವುದೇ ಅಭ್ಯರ್ಥಿಯ ಕುರಿತು ಸಿನಿಮಾ ಅಥವಾ ಇತರ ಮಾಧ್ಯಮಗಳಲ್ಲಿ ಪ್ರಚಾರ ನಡೆಸುವಂತಿಲ್ಲ. ಆದರೆ, ನೀತಿ ಸಂಹಿತೆ ನಡುವೆಯೇ ಪ್ರಧಾನಿ ಮೋದಿ ಜೀವನಾಧಾರಿತ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ,” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

About the author

ಕನ್ನಡ ಟುಡೆ

Leave a Comment