ರಾಷ್ಟ್ರ ಸುದ್ದಿ

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಸೇನೆಯ ಕ್ಷಿಪ್ರ ಕಾರ್ಯಾಚರಣೆ: ನಾಲ್ವರು ಉಗ್ರರು ಖತಂ

ಕಾಶ್ಮೀರ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಭಾರತೀಯ ಸಶಸ್ತ್ರ ಪಡೆಗಳು, ಲಷ್ಕರ್ ಎ ತೋಯ್ಬಾ ಸಂಘಟನೆಯ ನಾಲ್ವರು ಉಗ್ರರನ್ನು ಹೊಡೆದುರುಳಿಸಿವೆ. ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪುಲ್ವಾಮಾದಲ್ಲಿ ಭಯೋತ್ಪಾದಕರು ಅಡಗಿರುವ ಖಚಿತ ಮಾಹಿತಿ ಪಡೆದ ಭಾರತೀಯ ಯೋಧರು, ಶೋಧ ಕಾರ್ಯ ಆರಂಭಿಸಿದ್ದರು. ಈ ವೇಳೆ ಪರಸ್ಪರ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಯೋಧರು ಉಗ್ರರನ್ನು ಹೊಡೆದುರುಳಿಸಿದ್ದಾರೆಂದು ಸೇನಾ ಮೂಲಗಳು ತಿಳಿಸಿವೆ. ಭಯೋತ್ಪಾದಕರಿಂದ 4 ಸ್ವಯಂಚಾಲಿತ ರೈಫಲ್ಸ್ ಹಾಗೂ ಮದ್ದುಗುಂಡುಗಳನ್ನು ವಶಕ್ಕೆ ಪಡೆದಿರುವ ಸಶಸ್ತ್ರ ಪಡೆ ಯೋಧರು, ಶೋಧ ಕಾರ್ಯ ಮುಂದುವರೆಸಿದ್ದಾರೆ. ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ಜೆಷೆ ಮೊಹಮ್ಮದ್ ಭಯೋತ್ಪಾದಕರು ನಡೆಸಿದ್ದ ಆತ್ಮಾಹುತಿ ದಾಳಿಯಲ್ಲಿ 40ಕ್ಕೂ ಅಧಿಕ ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು.

 

About the author

ಕನ್ನಡ ಟುಡೆ

Leave a Comment