ರಾಷ್ಟ್ರ ಸುದ್ದಿ

ಪುಲ್ವಾಮ ಉಗ್ರ ದಾಳಿ ಪ್ರಕರಣ: ಕಾಶ್ಮೀರಿಗಳ ಮೇಲಿನ ಹಲ್ಲೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ; 11 ರಾಜ್ಯಗಳಿಗೆ ಸುಪ್ರೀಂ ಸೂಚನೆ

ನವದೆಹಲಿ: ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ದೇಶದ ವಿವಿಧ ರಾಜ್ಯಗಳಲ್ಲಿನ ಕಾಶ್ಮೀರಿಗಳ ಮೇಲಿನ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್ ಹಲ್ಲೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು 11 ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ಈ ಬಗ್ಗೆ ಇಂದು ಎಲ್ಲ 11 ರಾಜ್ಯಗಳ ಡಿಜಿಪಿಗಳು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂ ಕೋರ್ಚ್ ನಿರ್ದೇಶನ ನೀಡಿದ್ದು, ಆಯಾ ರಾಜ್ಯಗಳಲ್ಲಿರುವ ಕಾಶ್ಮೀರಿಗಳ ಭದ್ರತೆ ಆಯಾ ರಾಜ್ಯ ಸರ್ಕಾರದ್ದೇ ಆಗಿರುತ್ತದೆ. ಅವರ ಮೇಲೆ ಹಲ್ಲೆ ಬೆದರಿಕೆ ಮತ್ತು ಸಾಮಾಜಿಕ ಬಹಿಷ್ಕಾರದಂತಹ ಕೃತ್ಯಗಳಿಂದ ಅವರನ್ನು ರಕ್ಷಿಸುವುದು ರಾಜ್ಯ ಸರ್ಕಾರಗಳ ಹೊಣೆಯಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಬಗ್ಗೆ ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರು, 11 ರಾಜ್ಯಗಳ ಡಿಜಿಪಿಗಳು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದು, ಕಾಶ್ಮೀರಿಗಳಿಗೆ ಭದ್ರತೆ ನೀಡುವಂತೆ ಸೂಚಿಸಿದ್ದಾರೆ.

ಅಲ್ಲದೆ ಆಯಾ ರಾಜ್ಯಗಳಲ್ಲಿರುವ ಕಾಶ್ಮೀರಿಗಳ ಭದ್ರತೆ ಆಯಾ ರಾಜ್ಯ ಸರ್ಕಾರದ್ದೇ ಆಗಿರುತ್ತದೆ. ಅವರ ಮೇಲೆ ಹಲ್ಲೆ ಬೆದರಿಕೆ ಮತ್ತು ಸಾಮಾಜಿಕ ಬಹಿಷ್ಕಾರದಂತಹ ಕೃತ್ಯಗಳಿಂದ ಅವರನ್ನು ರಕ್ಷಿಸುವುದು ರಾಜ್ಯ ಸರ್ಕಾರಗಳ ಹೊಣೆಯಾಗಿರುತ್ತದೆ. ಕಾಶ್ಮೀರ ಮೂಲದ ಜನರ ಮೇಲೆ ಹಲ್ಲೆ ಮಾಡುವ, ಸಾಮಾಜಿಕ ನಿರ್ಬಂಧ ಹೇರುವವರ ವಿರುದ್ಧ ಕಠಿಣ ಕ್ರಮ ಜರುಗಿಸಿ ಎಂದು ಆದೇಶ ನೀಡಿದ್ದಾರೆ. ಅಲ್ಲದೆ ಇಂತಹ ಕೃತ್ಯಗಳನ್ನು ತಡೆಯಲು ಬೇಕಾದ ಎಲ್ಲ ಅಗತ್ಯ ಕ್ರಮಗಳನ್ನೂ ಕೈಗೊಳ್ಳುವಂತೆ ಕೋರ್ಟ್ ಆದೇಶ ನೀಡಿದೆ. ಇನ್ನು ಪುಲ್ವಾಮ ಉಗ್ರ ದಾಳಿಯಲ್ಲಿ 44 ಯೋದರು ಹುತಾತ್ಮರಾದ ಬಳಿಕ ದೇಶಾದ್ಯಂತ ಆಕ್ರೋಶ ಭುಗೆಲೆದ್ದಿತ್ತು.

ಸುಪ್ರೀಂ ಕೋರ್ಟ್ ಗೆ ಒಮರ್ ಅಬ್ದುಲ್ಲಾ ಕೃತಜ್ಞತೆ: ಇದೇ ವೇಳೆ ಅತ್ತ ಕಾಶ್ಮೀರಿಗರ ಭದ್ರತೆ ಕುರಿತು ಸುಪ್ರೀಂ ಕೋರ್ಟ್ ಆದೇಶ ಪ್ರಕಟವಾಗುತ್ತಿದ್ದಂತೆಯೇ ಇತ್ತ ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಅವರು ಪ್ರತಿಕ್ರಿಯೆ ನೀಡಿ ಕಾಶ್ನೀರಿಗರ ಭದ್ರತೆ ಕುರಿತು ಆದೇಶ ನೀಡಿದ ಸುಪ್ರೀಂ ಕೋರ್ಟ್ ಗೆ ಧನ್ಯವಾದ ಹೇಳಿದ್ದಾರೆ.

About the author

ಕನ್ನಡ ಟುಡೆ

Leave a Comment