ರಾಷ್ಟ್ರ ಸುದ್ದಿ

ಪುಲ್ವಾಮ ದಾಳಿಗಿಂತಲೂ ದೊಡ್ಡ ವಿಧ್ವಸಂಕ ಕೃತ್ಯವೆಸಗಲು ಜೈಶ್ ಮಹಾ ಸಂಚು: ಗುಪ್ತಚರ ಇಲಾಖೆ

ನವದೆಹಲಿ: ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ಗೆ ಪ್ರತಿಯಾಗಿ ಪಾಕಿಸ್ತಾನ ಮೂಲ ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಪುಲ್ವಾಮ ದಾಳಿಗಿಂತಲೂ ದೊಡ್ಡದಾದ ಬೃಹತ್ ಉಗ್ರ ದಾಳಿಗೆ ಸಂಚು ರೂಪಿಸುತ್ತಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಭಾರತೀಯ ವಾಯುಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರ ನೆಲೆಗಳನ್ನು ಧ್ವಂಸ ಮಾಡಿದ ಬೆನ್ನಲ್ಲೇ ಭಾರತದ ಮೇಲೆ ಮತ್ತೊಂದು ಬೃಹತ್ ದಾಳಿಗೆ ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಸಂಚು ರೂಪಿಸುತ್ತಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಪುಲ್ವಾಮ ಮಾದರಿಯ ಮತ್ತೊಂದು ಆತ್ಮಾಹುತಿ ದಾಳಿ ನಡೆಸಲು ಪಾಕಿಸ್ತಾನ ಬೆಂಬಲಿತ ಜೈಶ್-ಇ-ಮಹಮ್ಮದ್ ಭಯೋತ್ಪಾದಕಾ ಸಂಘಟನೆ ಸಿದ್ಧತೆ ನಡೆಸಿದ್ದು, ಈ ಬಾರಿ ಸರಣಿ ಆತ್ಮಹತ್ಯಾ ದಾಳಿಗಳನ್ನು ಯೋಜಿಸುವ ಕುರಿತು ಜೈಶ್ ಉಗ್ರ ಸಂಘಟನೆ ಸಂಚು ರೂಪಿಸುತ್ತಿದೆ ಎನ್ನಲಾಗಿದೆ. ಬಾಲಕೋಟ್‍ನ ಭಯೋತ್ಪಾದಕಾ ಶಿಬಿರಗಳ ಮೇಲೆ ಭಾರತೀಯ ವಾಯುಪಡೆ ನಡೆಸಿದ ವಾಯುದಾಳಿಗೆ ಪ್ರತೀಕಾರವಾಗಿ ಇನ್ನೊಂದು ಪುಲ್ವಾಮ ಮಾದರಿಯ ದಾಳಿಯನ್ನು ಮೂರು-ನಾಲ್ಕು ದಿನಗಳಲ್ಲಿ ಜೈಶ್ ಸಂಘಟನೆ ನಡೆಸಲಿದೆ ಎಂಬ ಮಾಹಿತಿ ಹೊರಬಿದ್ದಿದೆ. ಕಣಿವೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಗುಪ್ತಚರ ಮಾಹಿತಿಗಳನ್ನು ಆಧರಿಸಿ ಇದೀಗ ಕಣಿವೆ ರಾಜ್ಯದಲ್ಲಿ ಗರಿಷ್ಠ ಮಟ್ಟದ ಭದ್ರತಾ ವ್ಯವಸ್ಥೆಯನ್ನು ಮಾಡಲಾಗುತ್ತಿದ್ದು. ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಸೇನಾ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದೆ.

About the author

ಕನ್ನಡ ಟುಡೆ

Leave a Comment