ರಾಜಕೀಯ

ಪ್ರತಿಭಟನೆ ಮಾಡದಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಮನವಿ

ಬೆಂಗಳೂರು: ತಮ್ಮ ಪರವಾಗಿ ಯಾವುದೇ ಪ್ರತಿಭಟನೆ, ಚಳವಳಿ, ಹೋರಾಟ ಮಾಡಬಾರದು ಎಂದು ಜಲ ಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ತಮ್ಮ ಬೆಂಬಲಿಗರಿಗೆ ಮನವಿ ಮಾಡಿದ್ದಾರೆ.

ತಮಗೆ ಈ ನೆಲದ ಕಾನೂನಿನ ಮೇಲೆ ಅಪಾರ ಗೌರವ ಮತ್ತು ನಂಬಿಕೆ ಇದೆ. ತಮಗೆ ಎದುರಾಗಿರುವ ಸವಾಲು ಹಾಗೂ ಸಮಸ್ಯೆಗಳನ್ನು ಕಾನೂನಾತ್ಮಕ ಹಾಗೂ ರಾಜಕೀಯವಾಗಿ ಎದುರಿಸುವ ಶಕ್ತಿಯೂ ತಮಗಿದೆ. ರಾಜಕೀಯ ಎದುರಾಳಿಗಳಿಗೆ ರಾಜಕೀಯವಾಗಿಯೇ ಉತ್ತರ ಕೊಡುತ್ತೇನೆ. ಹೀಗಾಗಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ತಾಳ್ಮೆ ಕಳೆದುಕೊಳ್ಳಬೇಡಿ ಎಂದಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವುದು ಬೇಡ. ಇಂಥ ಹೋರಾಟಗಳಿಂದ ಜನಸಾಮಾನ್ಯರಿಗೂ ತೊಂದರೆ ಆಗುತ್ತದೆ ಎಂದು ತಿಳಿಸಿದ್ದಾರೆ.ಆದಾಯ ತೆರಿಗೆ ಇಲಾಖೆ ದಾಳಿ, ಜಾರಿ ನಿರ್ದೇಶನಾಲಯ ಪ್ರಕರಣ ದಾಖಲು ಮತ್ತಿತರ ಕಿರುಕುಳಗಳ ಹಿಂದೆ ರಾಜಕೀಯ ಒತ್ತಡ ಹಾಗೂ ದುರುದ್ದೇಶವಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಐಟಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ಚಳವಳಿ ಮಾಡದಂತೆ ಮನವಿ ಮಾಡಿದ್ದಾರೆ.

About the author

ಕನ್ನಡ ಟುಡೆ

Leave a Comment