ರಾಷ್ಟ್ರ

ಪ್ರತಿ ಜಿಲ್ಲೆಯಲ್ಲೂ ಆಯುರ್ವೇದ ಆಸ್ಪತ್ರೆ ಪ್ರಾರಂಭಿಸಲು ಮೋದಿ ಚಿಂತನೆ

ನವದೆಹಲಿ:ದೆಹಲಿಯಲ್ಲಿ ಅಖಿಲ ಭಾರತ ಆಯುರ್ವೇದ ಸಂಸ್ಥೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಮೋದಿಯವರು, ಬಡವರಿಗೆ ಅಗ್ಗದ ದರದಲ್ಲಿ ಆರೋಗ್ಯ ಸೇವೆ ನೀಡುವುದಕ್ಕೆ ಕೇಂದ್ರ ಬದ್ಧವಾಗಿದೆ. ಆಯುರ್ವೇದ ಎನ್ನುವುದು ಭಾರತದ ಶಕ್ತಿ. ಹೀಗಾಗಿ, ತಜ್ಞರು ಅಲೋಪತಿಯಂತೆ ಬೇಗನೆ ರೋಗ ಶಮನವಾಗಬಲ್ಲಂತ, ಯಾವುದೇ ಅಡ್ಡ ಪರಿಣಾಮ ಬೀರದಂತಹ ಆಯುರ್ವೇದ ಔಷಧವನ್ನು ಅಭಿವೃದ್ಧಿಪಡಿಸಬೇಕು ಎಂದು ಮೋದಿ ಹೇಳಿದರು.

ಪ್ರತಿ ಜಿಲ್ಲೆಯಲ್ಲೂ ಆಯುರ್ವೇದ ಆಸ್ಪತ್ರೆ ಸ್ಥಾಪಿಸಲು ಆಯುಷ್‌ ಸಚಿವಾಲಯ ಚಿಂತನೆ ನಡೆಸುತ್ತಿದೆ. 3 ವರ್ಷದಲ್ಲಿ 65 ಆಯುಷ್‌ ಆಸ್ಪತ್ರೆಗಳನ್ನು ತೆರೆಯಲಾಗಿದೆ ಎಂದರು. ಜತೆಗೆ ದೇಶದಲ್ಲಿ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಯಿಂದ ಸ್ಫೂರ್ತಿ ಪಡೆದು ಆರೋಗ್ಯ ಕ್ರಾಂತಿಗೆ ನಾಂದಿ ಹಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಬ್ರಿಟಿಷರ ಕಾಲದಲ್ಲಿ ಆಯುರ್ವೇದವನ್ನು ಕಡೆಗಣಿಸಲಾಗಿತ್ತು. ಸ್ವಾತಂತ್ರ್ಯ ಬಂದ ನಂತರವೂ ಆಯುರ್ವೇದವನ್ನು ಕಡೆಗಣಿಸಲಾಯಿತು. ಆದರೆ ನಾವು ಅದಕ್ಕೆ ಆದ್ಯತೆ ನೀಡುತ್ತಿದ್ದೇವೆ. ಸಾರ್ವಜನಿಕ ಆರೋಗ್ಯ ಸೇವೆಯ ಜತೆಗೆ ಆಯುರ್ವೇದವನ್ನು ವಿಲೀನ ಮಾಡುತ್ತೇವೆ’ ಎಂದು ಹೇಳಿದ್ದರು.

About the author

ಕನ್ನಡ ಟುಡೆ

Leave a Comment