ದೇಶ ವಿದೇಶ

ಪ್ರತೀಕಾರ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತದಿಂದ ಏರ್ ಸ್ಟ್ರೈಕ್; ಜೈಷ್ ಅಡಗುದಾಣಗಳು ಧ್ವಂಸ; ವರದಿ

ಇಸ್ಲಾಮಾಬಾದ್: ಪುಲ್ವಾಮಾ ಉಗ್ರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಕಳೆದ ರಾತ್ರಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ಮಾಡಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆಯ ಅಡಗು ದಾಣಗಳ ಮೇಲೆ ಕಳೆದ ರಾತ್ರಿ 3.30ರ ಸುಮಾರಿಗೆ 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆಜಿ ಬಾಂಬ್ ದಾಳಿ ಮಾಡಿದ್ದು ಪರಿಣಾಮ 500 ಮೀಟರ್ ಪ್ರದೇಶ ಸಂಪೂರ್ಣ ಸರ್ವನಾಶವಾಗಿದೆ ಎಂದು ತಿಳಿದುಬಂದಿದೆ. ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಮೂರು ಕಂಟ್ರೋಲ್ ರೂಂಗಳು ಧ್ವಂಸ ಮಾಡಿದೆ. ಒಟ್ಟು 1000 ಕೆಜಿಯ 10 ಬಾಂಬ್ ಗಳನ್ನು ಬಾಲಾಕೋಟ್, ಮುಜಾಫ್ಪರಾಬಾದ್ ಚಾಕೋಟಿಯಲ್ಲಿ ಏರ್ ಸ್ಟ್ರೈಕ್ ಮಾಡಲಾಗಿದೆ. ಇದಕ್ಕೆ ಪೂರಕವೆಂಬಂತೆ ಪಾಕ್ ನೆಲದಲ್ಲಿ ಭಾರತ ಸರ್ಜಿಕಲ್ ಸ್ಟ್ರೈಕ್ ಮಾಡಬಹುದೆಂದು ಹೆದರಿ ಕುಳಿತಿರುವ ಪಾಕಿಸ್ತಾನ ಇದೀಗ ಭಾರತೀಯ ಸೇನೆಯ ಯುದ್ಧ ವಿಮಾನ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಒಳ ಬಂದಿದೆ ಎಂದು ಗಂಭೀರ ಆರೋಪ ಮಾಡಿರುವುದು ಇದಕ್ಕೆ ಪುಷ್ಠಿ ತಂದಿದೆ. ಭಾರತೀಯ ಸೇನೆಯ ಯುದ್ಧ ವಿಮಾನ ಮುಜಾಫ್ಫರಾಬಾದ್ ಗೆ ಬಂದಿತ್ತು. ಈ ವೇಳೆ ಪಾಕಿಸ್ತಾನ ಸೇನೆ ತಕ್ಷಣವೇ ಕಾರ್ಯಾಚರಣೆ ಮಾಡಿತ್ತು. ಇದರಿಂದ ಭಾರತದ ಯುದ್ಧ ವಿಮಾನ ವಾಪಸಾಗಿದೆ ಎಂದು ಮೇಜರ್ ಜನರಲ್ ಅಸೀಫ್ ಗಫರ್ ಹೇಳಿದ್ದಾರೆ.

About the author

ಕನ್ನಡ ಟುಡೆ

Leave a Comment