ರಾಷ್ಟ್ರ ಸುದ್ದಿ

ಪ್ರಧಾನಿ ನರೇಂದ್ರ ಮೋದಿಯಂತೆ ಮಾಧ್ಯಮಗಳ ಮುಂದೆ ಮಾತನಾಡಲು ನಾನು ಹೆದರುತ್ತಿರಲಿಲ್ಲ: ಮನಮೋಹನ್ ಸಿಂಗ್

ನವದೆಹಲಿ: ಮಾಧ್ಯಮಗಳ ಮುಂದೆ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಹೆದರಬಹುದು ಆದರೆ ನಾನು ಎಂದಿಗೂ ಮಾಧ್ಯಮಗಳ ಮುಂದೆ ಮಾತನಾಡಲು ಹೆದರಿದಿಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.
ಚೇನ್‌ಜಿಂಗ್ ಇಂಡಿಯಾ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಮನಮೋಹನ್ ಸಿಂಗ್ ಅವರು ಎಂತಹ ಪರಿಸ್ಥಿತಿಯಲ್ಲೂ ನಾನು ಮಾಧ್ಯಮಗಳ ಮುಂದೆ ಮಾತನಾಡಲು ಹೆದರಿರಲಿಲ್ಲ. ಆದರೆ ಇಂದಿನ ಪ್ರಧಾನಿ ಮಾಧ್ಯಮಗಳ ಮುಂದೆ ಮಾತನಾಡಲು ಹೆದರುತ್ತಿದ್ದಾರೆ ಎಂದು ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಭಾರತವು ಒಂದು ಪ್ರಮುಖ ಆರ್ಥಿಕ ಜಾಗತಿಕ ಶಕ್ತಿಯಾಗಲು ಉದ್ದೇಶಿಸಲಾಗಿತೆಂದು ಮಾಜಿ ಪ್ರಧಾನಿಗಳು ಪ್ರತಿಪಾದಿಸಿದರು. ಇನ್ನು ಚೇನ್‌ಜಿಂಗ್ ಇಂಡಿಯಾ ಪುಸ್ತಕದಲ್ಲಿ ನಾನು ಪ್ರತಿ ಬಾರಿ ಮಾಧ್ಯಮಗಳ ಮುಂದೆ ಮಾತನಾಡಿದ್ದೇನೆ. ಅಲ್ಲದೆ ವಿದೇಶಿ ಪ್ರವಾಸಗಳನ್ನು ಮುಗಿಸಿ ಬಂದ ನಂತರವೂ ನಾನು ಹಲವು ಸುದ್ದಿಗೋಷ್ಠಿಗಳನ್ನು ನಡೆಸಿದ್ದು ಈ ಪುಸ್ತಕದಲ್ಲಿ ಅವುಗಳನ್ನು ನಮೂದಿಸಲಾಗಿದೆ ಎಂದರು.
ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ 10 ವರ್ಷಗಳ ಕಾರ್ಯವೈಖರಿ ಹಾಗೂ ಆರ್ಥಿಕ ಕ್ಷೇತ್ರದಲ್ಲಿ ದೇಶದ ಪ್ರಗತಿಯನ್ನು ಸಂಪೂರ್ಣವಾಗಿ ವಿವರಿಸಲಾಗಿದೆ ಎಂದು ಮನಮೋಹನ್ ಸಿಂಗ್ ಹೇಳಿದ್ದಾರೆ.

About the author

ಕನ್ನಡ ಟುಡೆ

Leave a Comment