ರಾಷ್ಟ್ರ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ಪತ್ನಿ ಕುರಿತು ನಾಲಿಗೆ ಹರಿಬಿಟ್ಟ ಅಕ್ಬರುದ್ದೀನ್ ಓವೈಸಿ

ಹೈದರಾಬಾದ್: ಲೋಕಸಭೆ ಚುನಾವಣೆ ಬೆನ್ನಲ್ಲೇ ಆಲ್ ಇಂಡಿಯನ್ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ(ಎಐಎಂಐಎಂ) ಪಕ್ಷದ ನಾಯಕ ಅಕ್ಬರುದ್ದೀನ್ ಓವೈಸಿ ಪ್ರಧಾನಿ ನರೇಂದ್ರ ಮೋದಿ ಪತ್ನಿ ಕುರಿತು ನಾಲಿಗೆ ಹರಿಬಿಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ವಿಷಯ ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದ್ದಾರೆ. ಕೋಟ್ಯಂತರ ರುಪಾಯಿ ಖರ್ಚಿನಲ್ಲಿ ವಿಶ್ವ ಪರ್ಯಟಣೆ ಮಾಡುವ ಮೋದಿ ಅವರು ತನ್ನ ಜತೆ ಪತ್ನಿಯನ್ನು ಕರೆದುಕೊಂಡು ಹೋಗುವ ಔದಾರ್ಯ ತೋರಲಿಲ್ಲ ಎಂದು ವೈಕ್ತಿಕ ವಿಚಾರ ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ನಾಯಕರ ಮಾತು ಮಿತಿ ಮೀರುತ್ತಿದೆ. ಮೊನ್ನೆಯಷ್ಟೆ ಚೌಕಿದಾರ್ ಎಂದು ಹೇಳುವ ನರೇಂದ್ರ ಮೋದಿ ತಲೆಗೆ ಟೋಪಿ ಹಾಕಿ, ಕೊರಳಲ್ಲಿ ಸೀಟಿ ಹಾಕಿ ನಿಲ್ಲಿಸುತ್ತೇನೆ ಎಂದು ಹೇಳುವ ಮೂಲಕ ಓವೈಸಿ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದರು.

About the author

ಕನ್ನಡ ಟುಡೆ

Leave a Comment