ರಾಷ್ಟ್ರ

ಪ್ರಧಾನಿ ಮೋದಿಗೆ ಧರ್ಮದ ಬಗ್ಗೆ ಏನೂ ಗೊತ್ತಿಲ್ಲ ರಾಹುಲ್ ಗಾಂಧಿ ಟೀಕೆ

ಚಿಕ್ಕಮಗಳೂರು: ರಾಹುಲ್ ಗಾಂಧಿ ಚಿಕ್ಕಮಗಳೂರಿನಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ತಮ್ಮಗೂ ಜಿಲ್ಲೆಗೂ ತನ್ನ ಅಜ್ಜಿ ಇಂದಿರಾ ಗಾಂಧಿಗೂ ಇರುವ ಭಾವನಾತ್ಮಕ ಸಂಬಂಧದ ಬಗ್ಗೆ ಹೇಳಿಕೊಂಡಿದ್ದಾರೆ.

ನನ್ನ ಅಜ್ಜಿಯ ಕಷ್ಟದ ದಿನಗಳಲ್ಲಿ  ನೀವು ಸಹಾಯ ಮಾಡಿದ್ದೀರಿ. ರಾಜಕೀಯ ವಿರೋಧಿಗಳು ಅವರನ್ನು ಸೋಲಿಸಲು ಪ್ರಯತ್ನಿಸಿದಾಗ ಅವರ ಜೊತೆ ನೀವು ನಿಂತು ಅವರಿಗೆ ರಾಜಕೀಯ ಪುನರ್ಜನ್ಮ ನೀಡಿದ್ದೀರಿ. ಅಂತಹ ಸ್ಥಳಕ್ಕೆ ನಾನಿಂದು ಬಂದಿದ್ದೇನೆ ಚಿಕ್ಕಮಗಳೂರಿಗೆ ಬಂದಿರುವುದು ನನಗೆ ತುಂಬಾ ಸಂತೋಷ ನೀಡಿದೆ ನೀವು ಮಾಡಿರುವ ಉಪಕಾರವನ್ನು ಎಂದೆಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ನನ್ನ ಅಜ್ಜಿ ಇಂದಿರಾ ಗಾಂಧಿಯವರನ್ನು ರಾಜಕೀಯವಾಗಿ ದಮನ ಮಾಡುವ ಸಂದರ್ಭದಲ್ಲಿ ಐತಿಹಾಸಿಕ ಗೆಲುವು ನೀಡಿ ನೀವು ಅವರನ್ನು ಗೆಲ್ಲಿಸಿದ್ದೀರಿ. ಇಂದು ನಿಮ್ಮಲ್ಲಿ ಮತ್ತೊಮ್ಮೆ ನಾನು ಬಂದು ವಿನಂತಿ ಮಾಡಿಕೊಳ್ಳುತ್ತಿದ್ದೇನೆ. ಬಿಜೆಪಿ ಆರ್ ಎಸ್ಎಸ್ ನವರು ದೇಶವನ್ನು ಒಡೆದು ಆಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

14 ವರ್ಷದ ಬಾಲಕನಿಗೆ ಕೇಳಿದರೂ  ಧರ್ಮದ ಬಗ್ಗೆ ಅರ್ಥವಾದ ಮಾತುಗಳನ್ನು ಹಾಡುತ್ತಾನೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧರ್ಮದ ಬಗ್ಗೆ ಏನೂ ಗೊತ್ತಿಲ್ಲ ಎಂದು ವ್ಯಂಗ್ಯ ಮಾಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಸಮಯ ಸಿಕ್ಕಗೆಲ್ಲಾ ವ್ಯಂಗ್ಯ ಮಾಡುವ ರಾಹುಲ್ ಗಾಂಧಿ.  ಶೃಂಗೇರಿ ಮಠಕ್ಕೆ ಭೇಟಿ ನೀಡಿದಾಗ ಅಲ್ಲಿ ಬಾಲಕನೊಬ್ಬನ ಬಳಿ  ಧರ್ಮದ ಬಗ್ಗೆ ಕೇಳಿದಾಗ ಧರ್ಮ ಎಂದರೇ “ಸತ್ಯಮೇವ ಜಯತೇ” ಎಂದು ಹೇಳಿದ ಆ ಬಾಲಕನ  ಮಾತು ಕೇಳಿ ಆಶ್ಚರ್ಯವಾಯಿತು ಎಂದು ಹೇಳಿದ್ದರು.

ಧರ್ಮದ ಬಗ್ಗೆ ಗೊತ್ತಿಲ್ಲದ ಪ್ರದಾನಿ ಮೋದಿ ಪದೇ ಪದೇ ಸುಳ್ಳು ಹೇಳುತ್ತಿದ್ದಾರೆ. ದೇಶದಲ್ಲಿ ಕಳೆದ 60 ವರ್ಷಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನೆಡೆದಿಲ್ಲ ಎಂದು ಮೋದಿ ಆರೋಪಿಸಿದ್ದಾರೆ. ಅಂದರೆ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗಲೂ ಕೂಡ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ ಎಂದು ಅರ್ಥವೇ ಎಂದು  ರಾಹುಲ್ ಗಾಂಧಿಯವರು ಪ್ರಶ್ನಿಸಿದ್ದಾರೆ.

 

 

 

About the author

ಕನ್ನಡ ಟುಡೆ

Leave a Comment