ರಾಷ್ಟ್ರ ಸುದ್ದಿ

ಪ್ರಧಾನಿ ಮೋದಿ ಹಿಟ್ಲರ್ ನಂತೆ ವರ್ತಿಸುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ಆರೋಪ

ಮುಂಬೈ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಜರ್ಮನಿಯ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ರೀತಿ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಂಸದ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.ಅವರು ನಿನ್ನೆ ಮುಂಬೈಯ ಬಾಂದ್ರಾದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಬಚಾವೊ ಪರಿಷತ್ ನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಬಿಜೆಪಿ ಆಡಳಿತದಲ್ಲಿ ದೇಶ ನಲುಗಿ ಹೋಗುತ್ತಿದ್ದು, ಬೇರೆ ಸಂಸ್ಥೆಗಳನ್ನು ನಾಶ ಮಾಡಿದಂತೆ ಸಂವಿಧಾನವನ್ನು ಆರ್ ಎಸ್ಎಸ್ ಮತ್ತು ಬಿಜೆಪಿ ನಾಶಪಡಿಸಲು ಕಾಂಗ್ರೆಸ್ ಬಿಡುವುದಿಲ್ಲ ಎಂದು ಹೇಳಿದರು.ಈ ದೇಶದ ಸಂವಿಧಾನ ಯಾವುದೇ ನಿರ್ದಿಷ್ಟ ಜಾತಿ, ಧರ್ಮ ಅಥವಾ ಸಮುದಾಯಕ್ಕೆ ಸೇರಿದ್ದಲ್ಲ. ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನವಾಗಿ ಸೇರಿದ್ದಾಗಿದೆ. ಸ್ವಾತಂತ್ರ್ಯದ ಹಕ್ಕುಗಳನ್ನು ಸಂಸದೀಯ ಪ್ರಜಾಪ್ರಭುತ್ವದಲ್ಲಿ ಬಿಜೆಪಿ ಸರ್ಕಾರ ಗೌರವಿಸುತ್ತದೆಯೇ ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಕಳೆದ ನಾಲ್ಕೂವರೆ ವರ್ಷಗಳ ಆಡಳಿತದಲ್ಲಿ ಬಿಜೆಪಿ ಸರಿಯಾದ ದಿಕ್ಕಿನಲ್ಲಿ ನಾಲ್ಕು ಹೆಜ್ಜೆ ಕೂಡ ಇಟ್ಟಿಲ್ಲ. ಕಳೆದ 70 ವರ್ಷಗಳಲ್ಲಿ ಏನು ಮಾಡಿದ್ದೀರಿ ಎಂದು ಕಾಂಗ್ರೆಸ್ ನ ಕಡೆಗೆ ಬೆರಳು ತೋರಿಸಿ ಕೇಳುವ ಅಧಿಕಾರ ಬಿಜೆಪಿಯವರಿಗೆ ಇಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅದು ಜನರ ಮಾತು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಪತ್ರಿಕಾ ಹಕ್ಕನ್ನು ಹತ್ತಿಕ್ಕುತ್ತಾ ಬಂದು ನಾಶ ಮಾಡುತ್ತಿದೆ ಎಂದು ಆರೋಪಿಸಿದರು.ಬಿಜೆಪಿ ದೇಶದಲ್ಲಿ ಸರ್ವಾಧಿಕರ ಆಳ್ವಿಕೆ ನಡೆಸಲು ಯತ್ನಿಸುತ್ತಿದೆ. ಜರ್ಮನಿಯಲ್ಲಿ ಅಡಾಲ್ಫ್ ಹಿಟ್ಲರ್ ರೀತಿಯಲ್ಲಿ ಭಾರತದಲ್ಲಿ ನರೇಂದ್ರ ಮೋದಿಯವರು ಆಳ್ವಿಕೆ ನಡೆಸಲು ನೋಡುತ್ತಿದ್ದಾರೆ. ನಮ್ಮ ದೇಶದ ಸಂವಿಧಾನ ಇಂದು ಅಪಾಯದ ಸ್ಥಿತಿಯಲ್ಲಿದೆ, ಅದನ್ನು ನಾಶಪಡಿಸಲು ಹೊರಟಿರುವ ಬಿಜೆಪಿಯ ಪ್ರಯತ್ನಕ್ಕೆ ನಾವು ಹೋರಾಡಬೇಕು ಎಂದರು.ದೇಶವನ್ನು ಸ್ಥಾಪಿಸಿದ ತತ್ವಗಳ ಮೇಲೆ ಒಂದೇ ಸಮನೆ ದಾಳಿ ನಡೆಯುತ್ತಿದೆ ಎಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮುಂಬೈ ಕಾಂಗ್ರೆಸ್ ಮುಖ್ಯಸ್ಥ ಸಂಜಯ್ ನಿರುಪಮ್ ವಾಗ್ದಾಳಿ ನಡೆಸಿದರು. ಭಾರತ ಸಂವಿಧಾನ ಆತ್ಮವಾಗಿದ್ದು ಅದನ್ನು ಇಂದು ಕೊಲ್ಲಲಾಗುತ್ತಿದೆ. ಕಳೆದ 4 ವರ್ಷಗಳಿಂದ ಬಿಜೆಪಿ ತನ್ನದೇ ಆದ ರೀತಿಯಲ್ಲಿ ಆಡಳಿತ ನಡೆಸುತ್ತಿದೆ. ಅದು ದೇಶದ ಕಾನೂನು ಮತ್ತು ಸುವ್ಯವಸ್ಥೆಗೆ ಹೊಂದಿಕೆಯಾಗುತ್ತಿಲ್ಲ ಎಂದರು.

About the author

ಕನ್ನಡ ಟುಡೆ

Leave a Comment