ರಾಷ್ಟ್ರ

ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆ,ಪ್ರಧಾನಿ ಮೋದಿ ವಿಷಾದ

ಹೊಸದಿಲ್ಲಿ /ಬೆಂಗಳೂರು: ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) ಈ ವರ್ಷದ 12ನೇ ತರಗತಿಯ ಅರ್ಥಶಾಸ್ತ್ರ ಹಾಗೂ 10ನೇ ತರಗತಿಯ ಗಣಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಈ ಎರಡು ಪರೀಕ್ಷೆಯನ್ನು ಪುನಃ ನಡೆಸಲು ಮಂಡಳಿ ತೀರ್ಮಾನಿಸಿದೆ. ದೇಶಾದ್ಯಂತ ಸೋಮವಾರ ಮಂಡಳಿಯ 12ನೇ ತರಗತಿಯ ಅರ್ಥಶಾಸ್ತ್ರ ಪರೀಕ್ಷೆ ನಡೆದಿತ್ತು. ಬುಧವಾರ, 10ನೇ ತರಗತಿಯ ಗಣಿತ ಪರೀಕ್ಷೆ ನಡೆದಿತ್ತು.

ಈ ಎರಡೂ ವಿಷಯಗಳ ಪ್ರಶ್ನೆ ಪತ್ರಿಕೆಯ ಕೆಲವು ಭಾಗಗಳು ಸೋರಿಕೆಯಾಗಿದ್ದವು. ಪ್ರಧಾನಿ ಮೋದಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್‌ ಜಾವಡೇಕರ್‌ಗೆ ಸೂಚಿಸಿದ್ದಾರೆ. ಈ ವಿಚಾರ ಗಮನಕ್ಕೆ ಬರುತ್ತಲೇ, ತನ್ನ ಅಧೀನದ ಎಲ್ಲಾ ವಿದ್ಯಾಸಂಸ್ಥೆಗಳಿಗೆ ಅಧಿಸೂಚನೆ ರವಾನಿಸಿರುವ ಸಿಬಿಎಸ್‌ಇ ಈ ಎರಡೂ ವಿಷಯಗಳಲ್ಲಿ ಮರು ಪರೀಕ್ಷೆ ನಡೆಸುವುದಾಗಿ ತಿಳಿಸಿದ್ದು, ವಾರ‌ದೊಳಗೆ ಪರೀಕ್ಷಾ ದಿನಾಂಕ ಪ್ರಕಟಿಸುವುದಾಗಿ ಹೇಳಿದೆ.

ಪ್ರಧಾನಿ ಮೋದಿ ವಿಷಾದ: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಮಾನವ ಸಂಪನ್ಮೂಲ ಇಲಾಖೆ ಸಚಿವ ಪ್ರಕಾಶ್‌ ಜಾವಡೇಕರ್‌ಗೆ ಸೂಚಿಸಿ ದ್ದಾರೆ. ಕೇಂದ್ರ ಸಚಿವರ ಜತೆ ಮಾತನಾಡಿದ ಅವರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳು ವಂತೆ ಸೂಚಿಸಿದ್ದಾರೆ.

About the author

ಕನ್ನಡ ಟುಡೆ

Leave a Comment